ಶಾಸಕರ ಪುತ್ರಿ ಐಶ್ವರ್ಯಾ ವಿರುದ್ಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 132, 115 (2), 352 ಮತ್ತು 351 (2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಐಶ್ವರ್ಯಾ ಅವರು ಸಹ, ಪಿಎಸ್ಐ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರತಿದೂರು ದಾಖಲಿಸಿದ್ದಾರೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.