ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ, ಅಂಗಾಂಗಕ್ಕಾಗಿ ಎದುರು ನೋಡುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಮಾನವ ಅಂಗಾಂಗದಾನ ಕಸಿ ಕಾಯ್ದೆ 1994 ಅಂಗಾಂಗದಾನಕ್ಕೆ ಉತ್ತೇಜನ ನೀಡುತ್ತಿದೆ. ಮಿದುಳು ನಿಷ್ಕ್ರಿಯಗೊಂಡ ಯಾವುದೇ ವ್ಯಕ್ತಿ ಅಂಗಾಂಗಗಳನ್ನು ದಾನ ಮಾಡಬಹುದಾಗಿದೆ. ಒಬ್ಬ ದಾನಿಯು ಹೃದಯ, ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು, ಸಣ್ಣ ಕರುಳು ಹಾಗೂ ಮೇದೋಜೀರಕ ಗ್ರಂಥಿ ದಾನದ ಮೂಲಕ ಎಂಟು ಜೀವಗಳಿಗೆ, ಹೃದಯದ ಕವಾಟ, ಚರ್ಮ, ಕಣ್ಣು ಸೇರಿ ವಿವಿಧ ಅಂಗಾಂಶಗಳ ನೆರವಿನಿಂದ 50 ಮಂದಿಗೆ ನೆರವಾಗಬಹುದಾಗಿದೆ ಎಂದು ಜೀವಸಾರ್ಥಕತೆ ಸಂಸ್ಥೆ ತಿಳಿಸಿದೆ.