ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಶೇ.5 ಹೆಚ್ಚಳ

ಪ್ರಥಮ ಬಾರಿಗೆ ಹಾಜರಾಗುವ ಶಾಲಾ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು 710 ರೂ.ಗಳಿಂದ 746 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕವನ್ನು 248 ರೂ.ಗಳಿಂದ 260ಕ್ಕೆ ಏರಿಸಲಾಗಿದೆ. ಈಗಾಗಲೇ ನೋಂದಣಿಯಾಗಿರುವ ಅಭ್ಯರ್ಥಿಗಳು 76ರೂ.ಗಳ ನವೀಕರಣ ಶುಲ್ಕ ಪಾವತಿಸಬೇಕು.
Karnataka School Exam and Assessment Board
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯGoogle
Published on: 

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಢಳಿಯು ಮುಂಬರುವ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಶುಲ್ಕವನ್ನು ಶೇ.5ರಷ್ಟು ಹೆಚ್ಚಳ ಮಾಡಿದೆ.

ಪ್ರಥಮ ಬಾರಿಗೆ ಹಾಜರಾಗುವ ಶಾಲಾ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು 710 ರೂ.ಗಳಿಂದ 746 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕವನ್ನು 248 ರೂ.ಗಳಿಂದ 260ಕ್ಕೆ ಏರಿಸಲಾಗಿದೆ. ಈಗಾಗಲೇ ನೋಂದಣಿಯಾಗಿರುವ ಅಭ್ಯರ್ಥಿಗಳು 76ರೂ.ಗಳ ನವೀಕರಣ ಶುಲ್ಕ ಪಾವತಿಸಬೇಕು.

ಪುನರಾವರ್ತಿತ ಶಾಲಾ/ ಖಾಸಗಿ ಅಭ್ಯರ್ಥಿಗಳು ಒಂದು ವಿಷಯಕ್ಕೆ 470 ರೂ. ಎರಡು ವಿಷಯಕ್ಕೆ 587 ರೂ. ಮತ್ತು ಮೂರು ಹಾಗೂ ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 790 ರೂ. ಪರೀಕ್ಷಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಮಂಡಳಿ ಅಧ್ಯಕ್ಷರು ಪ್ರಕಟಣೆ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net