ರಾಯಚೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ಪತ್ರಕರ್ತರ ರಾಜ್ಯ ಸಮ್ಮೇಳನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
Published on

ಪ್ರಮುಖ ಮುಖ್ಯಾಂಶಗಳು

  • ಬೀದರ್​ನಲ್ಲಿ 40ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
  • ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನಿರ್ಧಾರ
  • 41ನೇ ಪತ್ರಕರ್ತರ ರಾಜ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯಲಿದೆ
ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ಪತ್ರಕರ್ತರ ರಾಜ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯಲಿದೆ.
ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ನಡೆದ ಪ್ರತಿನಿಧಿಗಳ ಸಮಾವೇಶ/ಸರ್ವ ಸದಸ್ಯರ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ರಾಯಚೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲಾ ಘಟಕಗಳು ಮುಂದಿನ ರಾಜ್ಯ ಸಮ್ಮೇಳನ ಆಯೋಜನೆಗೆ ಮುಂದೆ ಬಂದಿದ್ದವು. ಅಂತಿಮವಾಗಿ ರಾಯಚೂರಿನಲ್ಲಿ ಸಮ್ಮೇಳನ ನಡೆಸಲು ನಿರ್ಣಯಿಸಲಾಗಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಘೋಷಿಸಿದರು.
ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಈ ಕುರಿತು ಜಿಲ್ಲಾ ಘಟಕಗಳಿಗೆ ಪತ್ರ ಬರೆದು ಅಭಿಪ್ರಾಯ ಪಡೆಯಲಾಗುವುದು. ಬಳಿಕ ರಾಜ್ಯ ಘಟಕದ ವಿಶೇಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಂಘದ ಬೈಲಾ ತಿದ್ದುಪಡಿ ಮಾಡಿ ಪದಾಧಿಕಾರಿಗಳ ಅವಧಿಯನ್ನು ಮೂರು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಬೇಕೇ ಅಥವಾ ಈಗಿರುವಂತೆ ಮೂರು ವರ್ಷಗಳಿಗೆ ಸೀಮಿತಗೊಳಿಸಬೇಕೇ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.
ಬೈಲಾ ತಿದ್ದುಪಡಿ ಸಂಬಂಧಿಸಿದಂತೆ ಸದಸ್ಯರಿಂದ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾದವು. ಸದಸ್ಯರ ಗುರುತಿನ ಚೀಟಿಯ ಅವಧಿಯನ್ನು ಮೂರು ವರ್ಷಕ್ಕೆ ವಿಸ್ತರಣೆ ಮಾಡಬೇಕು. ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ವಿತರಣೆಯಲ್ಲಿನ ಸಮಸ್ಯೆ ಬಗೆಹರಿಸಬೇಕು. ನಕಲಿ ಪತ್ರಕರ್ತರ ಹಾವಳಿ ತಪ್ಪಿಸಬೇಕು ಎಂಬ ಒತ್ತಾಯ ಕೇಳಿ ಬಂದವು. ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾದ ಮದನ್ ಪಾಟೀಲ, ಮತ್ತಿಕೆರೆ ಜೈರಾಮ್, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಕಾರ್ಯದರ್ಶಿಗಳಾದ ಪುಂಡಲೀಕ ಬಾಳೋಜಿ, ಸೋಮಶೇಖರ ಕೆರೆಗೂಡು, ಲಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ ಹೊಳ್ಳಾ, ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ, ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net