ಕೆಎಎಸ್ ವ್ಯಕ್ತಿತ್ವ ಪರೀಕ್ಷೆ ಶುರು, ಅಭ್ಯರ್ಥಿಗಳಿಗೆ ನೀಡಿರುವ ಸೂಚನೆಗಳೇನು?

ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗ
Published on

ಪ್ರಮುಖ ಮುಖ್ಯಾಂಶಗಳು

  • ಗೆಜೆಟೆಡ್ ಪ್ರೊಬೇಷನರ್ಸ್‌ (ಗ್ರೂಪ್ ಎ ಮತ್ತು ಗ್ರೂಪ್ ಬಿ) ಹುದ್ದೆಗಳಿಗೆ ಮೇ 6ರಿಂದ 10ರವರೆಗೆ ವ್ಯಕ್ತಿತ್ವ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ
  • ಮುಖ್ಯ ಪರೀಕ್ಷೆಯಿಂದ ವ್ಯಕ್ವಿತ್ವ ಪರೀಕ್ಷೆಗೆ 1:3ರ ಅನುಪಾತದಲ್ಲಿ ಅರ್ಹತೆ ಪಡೆದ 1,158 ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆ ನಡೆಸಲಾಗುತ್ತಿದೆ.
  • ವೇಳಾಪಟ್ಟಿ ಅನ್ವಯ ಅಭ್ಯರ್ಥಿಗಳ ನೋಂದಣಿ ಸಂಖ್ಯೆ, ಹೆಸರು, ವ್ಯಕ್ತಿತ್ವ ಪರೀಕ್ಷೆಯ ದಿನಾಂಕ ಮತ್ತು ಸಮಯದ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್‌ (ಗ್ರೂಪ್ ಎ ಮತ್ತು ಗ್ರೂಪ್ ಬಿ) ಹುದ್ದೆಗಳಿಗೆ ಮೇ 6ರಿಂದ 10ರವರೆಗೆ ವ್ಯಕ್ತಿತ್ವ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದೆ.
ಮುಖ್ಯ ಪರೀಕ್ಷೆಯಿಂದ ವ್ಯಕ್ವಿತ್ವ ಪರೀಕ್ಷೆಗೆ 1:3ರ ಅನುಪಾತದಲ್ಲಿ ಅರ್ಹತೆ ಪಡೆದ 1,158 ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆ ನಡೆಸಲಾಗುತ್ತಿದೆ. ಆಯೋಗದ ಅನುಮೋದಿತ ವ್ಯಕ್ತಿತ್ವ ಪರೀಕ್ಷೆಯ ವೇಳಾಪಟ್ಟಿ ಅನ್ವಯ ಅಭ್ಯರ್ಥಿಗಳ ನೋಂದಣಿ ಸಂಖ್ಯೆ, ಹೆಸರು, ವ್ಯಕ್ತಿತ್ವ ಪರೀಕ್ಷೆಯ ದಿನಾಂಕ ಮತ್ತು ಸಮಯದ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷೆಯ ಪತ್ರಗಳನ್ನು ಸಹ ರವಾನಿಸಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ಜ್ಯೋತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅರ್ಹರಾದ ಅಭ್ಯರ್ಥಿಗಳ 1:3ರ ಅನುಪಾತದ ಪಟ್ಟಿಯನ್ನು ಮಾ.2ರಂದು ಪ್ರಕಟಿಸಿತ್ತು.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿಗಾಗಿ 2025ರ ೆ.13ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಕಳೆದ ವರ್ಷದ ಮೇ 3, 5, 7 ಹಾಗೂ 9ರಂದು ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರಂತೆ, ಉಳಿಕೆ ಮೂಲ ವೃಂದದಲ್ಲಿ 930 ಹಾಗೂ ಹೈದರಾಬಾದ್- ಕರ್ನಾಟಕ ವೃಂದದಲ್ಲಿ 222 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಅರ್ಹರೆಂದು ಕೆಪಿಎಸ್‌ಸಿ ೋಷಿಸಿತ್ತು. ಅದರ ಜತೆಗೆ ಹೈಕೋರ್ಟ್ ಆದೇಶದ ಅನ್ವಯ 6 ಅಭ್ಯರ್ಥಿಗಳಿಗೆ ಅನುಮತಿ ನೀಡಲಾಗಿದೆ. ಈ ಪಟ್ಟಿಯನ್ನು ಏ.21ರಂದು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಇದೀಗ ಅಂತಿಮವಾಗಿ ವ್ಯಕ್ತಿತ್ವ ಪರೀಕ್ಷೆ ನಡೆಸಿದ ಬಳಿಕ ಅಂತಿಮ ಪಟ್ಟಿ ಸಿದ್ಧವಾಗಲಿದೆ.
ಮುಖ್ಯ ಪರೀಕ್ಷೆಯಲ್ಲಿ ಒಂದೇ ಬ್ಲಾಕ್‌ನ ಹತ್ತಾರು ಅಭ್ಯರ್ಥಿಗಳು ರ‌್ಯಾಂಕ್ ಪಡೆದಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಈ ಸಂಬಂಧ ಅಭ್ಯರ್ಥಿಗಳು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net