ಕಸಾಪ ಅಧ್ಯಕ್ಷ ಸಬಾಸ್ಟೀನ್‌ಗೆ ಸನ್ಮಾನ

ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅವರನ್ನು ಸನ್ಮಾನಿಸಿದರು.
ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅವರನ್ನು ಸನ್ಮಾನಿಸಿದರು.
Published on
ಸುಂಟಿಕೊಪ್ಪ: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿ ವತಿಯಿಂದ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅವರನ್ನು ಸನ್ಮಾನಿಸಲಾಯಿತು.
ಇತ್ತೀಚೆಗೆ ಮಡಿಕೇರಿಯ ಹೋಟೆಲ್ ವ್ಯಾಲಿವೂ ಸಭಾಂಗಣದಲ್ಲಿ ಅಯೋಜಿಸಿದ್ದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆಯಲ್ಲಿ ಸಂಘದ ಅಧ್ಯಕ್ಷ ಜಾನ್ಸನ್ ಪಿಂಟೋ ಅವರು, ಸುಂಟಿಕೊಪ್ಪದಲ್ಲಿ ಆಯೋಜಿಸಲಾದ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಹಾಗೂ ಪದಾಧಿಕಾರಿಗಳು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು ಅವರನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಮಿತಿಯ ಪದಾಧಿಕಾರಿಗಳು ಗೌರವಿಸಿದರು.
ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಮಿತಿ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್, ಉಪಾಧ್ಯಕ್ಷ ಜೋಕಿಂ ವಾಸ್, ವಿನ್ಸಿ ಡಿಸೋಜ, ಪ್ರಧಾನ ಕಾರ್ಯದರ್ಶಿ ಅಂತೋಣಿ ಡಿಸೋಜ, ಸಂಘಟನಾ ಕಾರ್ಯದರ್ಶಿ ಮಾರ್ವಿನ್ ಲೋಬೋ, ವಿರಾಜಪೇಟೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ತಾಲೂಕು ಅಧ್ಯಕ್ಷ ಆಗಸ್ಟಿನ್ ಜೇವಿಯರ್, ಮಾಜಿ ಕಾರ್ಯದರ್ಶಿ ಜೂಡಿವಾಜ್, ಪೋನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಸುಭಾಷ್ ಮ್ಯಾಥ್ಯು, ಮಾರ್ಷಲ್, ಜೋಸೆಫ್ ಡಿಸೋಜ, ಬ್ಲೇಜ್ಸಿ ಸಿಕ್ವೇರಾ, ರಾಬಿನ್‌ಪೌಲ್, ಕುಶಾಲನಗರ ತಾಲೂಕು ಘಟಕದ ಕೆ.ಎ.ಪೀಟರ್, ಮಹಿಳಾ ಘಟಕದ ಅಧ್ಯಕ್ಷೆ ಫಿಲೋಮಿನಾ, ಉಪಾಧ್ಯಕ್ಷೆ ರೋಸ್‌ಮೇರಿ ರಾಡ್ರಿಗಸ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net