ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜನೆ
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆ ನೀಡಿದ್ದಾರೆ. ಅಂತೆಯೇ ಯುವಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ. ನಂದೀಶ್ ಕರೆ ನೀಡಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಯಕ ಶರಣರ ಜಯಂತಿ(ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗ ಪೆದ್ದಿ) ಉದ್ಘಾಟಿಸಿ ಮಾತನಾಡಿದರು.
ಕಾಯಕ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆ ಮಾಡಿದ್ದಾರೆ. ಶರಣರು ಅನ್ನದಾಸೋಹ ಮತ್ತು ಕಾಯಕ ದಾಸೋಹವನ್ನು ಆರಾಧಿಸುತ್ತಿದ್ದರು. ಯುವ ಸಮುದಾಯವು ಶರಣರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕು. ಮತ್ತು ಸಮುದಾಯಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡ ಆಯೋಗದ ಮಾಜಿ ಸದಸ್ಯ ವೆಂಕಟೇಶ್ ದೊಡ್ಡೇರಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ, ವಿವಿಧ ಸಂಸ್ಥೆ ಮುಖಂಡರಾದ ಎಲ್.ಸಂದೇಶ್, ಕೃಷ್ಣ, ತಮ್ಮಣ್ಣ, ಸಿ.ಕೆ.ಪಾಪಯ್ಯ, ಎನ್.ಆರ್.ಚಂದ್ರಶೇಖರ್, ಕೆಂಪಣ್ಣ ಇತರರಿದ್ದರು.