ಕೆಇಎ: ನೀಟ್ ಸಂಖ್ಯೆ ನೋಂದಣಿಗೆ ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Published on

ಪ್ರಮುಖ ಮುಖ್ಯಾಂಶಗಳು

  • ನೀಟ್ ಫಲಿತಾಂಶಕ್ಕೆ ಕಾದು, ನಂತರ ನೋಂದಣಿ ಪ್ರಕ್ರಿಯೆ ಆರಂಭಿಸುವುದರಿಂದ ಗಡಿಬಿಡಿ ಆಗುತ್ತಿತ್ತು. ಹೀಗಾಗಿ ಈ ಬಾರಿ ನೀಟ್ ಫಲಿತಾಂಶಕ್ಕೂ ಮುನ್ನವೇ ಅಭ್ಯರ್ಥಿಗಳ ಮಾಹಿತಿ ಸಂಗ್ರಹ
  • ಕೊನೇ ಕ್ಷಣದ ಗೊಂದಲಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ನೀಟ್ ಪರೀಕ್ಷೆ ಬರೆದ ಎಲ್ಲರೂ ನೀಟ್ ರೋಲ್ ನಂಬರ್ ದಾಖಲಿಸಲು ಕೋರಲಾಗಿದೆ.
  • ಫಲಿತಾಂಶ ಬಂದ ನಂತರ ಅರ್ಹರಿಗೆ ಮಾತ್ರ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ
ಬೆಂಗಳೂರು: ಸಿಇಟಿಗೆ ಅರ್ಜಿ ಸಲ್ಲಿಸಿ, ನೀಟ್ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್, ಅರ್ಜಿ ಸಂಖ್ಯೆ ಹಾಗೂ ನೀಟ್ ಪ್ರವೇಶ ಪತ್ರವನ್ನು ಅಪ್‌ಲೋಡ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಮಾಡಿದೆ.
ಈ ಸಂಬಂಧ ಪ್ರಾಧಿಕಾರದ ವೆಬ್ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ನೀಟ್ ಫಲಿತಾಂಶಕ್ಕೆ ಕಾದು, ನಂತರ ನೋಂದಣಿ ಪ್ರಕ್ರಿಯೆ ಆರಂಭಿಸುವುದರಿಂದ ಗಡಿಬಿಡಿ ಆಗುತ್ತಿತ್ತು. ಹೀಗಾಗಿ ಈ ಬಾರಿ ನೀಟ್ ಫಲಿತಾಂಶಕ್ಕೂ ಮುನ್ನವೇ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸುವುದರಿಂದ ಕೊನೇ ಕ್ಷಣದ ಗೊಂದಲಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ನೀಟ್ ಪರೀಕ್ಷೆ ಬರೆದ ಎಲ್ಲರೂ ನೀಟ್ ರೋಲ್ ನಂಬರ್ ದಾಖಲಿಸಲು ಕೋರಲಾಗಿದೆ. ಫಲಿತಾಂಶ ಬಂದ ನಂತರ ಅರ್ಹರಿಗೆ ಮಾತ್ರ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೇವಲ ನೀಟ್ ಪರೀಕ್ಷೆ ಬರೆದಿರುವ ಹಾಗೂ ಕೆಇಎ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಇದುವರೆಗೂ ಕೆಇಎಗೆ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಕೂಡ ಅರ್ಜಿ ಸಲ್ಲಿಸಬೇಕು. ಇದಕ್ಕೂ ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net