ಶಾಸಕ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಹರ್ಷ ಟಿ.ಎಂ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಶಾಸಕರಾದ ಟಿ.ಬಿ.ಜಯಚಂದ್ರ, ಎಸ್.ಆರ್.ಶ್ರೀನಿವಾಸ್, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಆರ್.ರಾಜೇಂದ್ರ, ಡಿ.ಟಿ.ಶ್ರೀನಿವಾಸ್, ರಮೇಶ್ ಬಾಬು, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ಆಗಮಿಸಲಿದ್ದಾರೆ ಎಂದರು.