ಕೆಂಪೇಗೌಡ ದೂರದೃಷ್ಟಿಯುಳ್ಳ ಆಡಳಿತಗಾರ

ಅರಕಲಗೂಡು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ಕೆ.ಸಿ. ಸೌಮ್ಯಾ, ನಾಗೇಂದ್ರ ಕುಮಾರ್, ನರಸೇಗೌಡ, ರಶ್ಮಿ ಇತರರಿದ್ದರು.
ಅರಕಲಗೂಡು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ಕೆ.ಸಿ. ಸೌಮ್ಯಾ, ನಾಗೇಂದ್ರ ಕುಮಾರ್, ನರಸೇಗೌಡ, ರಶ್ಮಿ ಇತರರಿದ್ದರು.
Published on
ಅರಕಲಗೂಡು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27ರಂದು ತಾಲೂಕಿನಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವಂತೆ ಶಾಸಕ ಎ.ಮಂಜು ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರಿಗೆ ಸೂಚನೆ ನೀಡಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರರಾಗಿದ್ದು, ಬೆಂಗಳೂರು ನಗರ ನಿರ್ಮಾಣದ ಮೂಲಕ ರಾಜ್ಯದ ಇತಿಹಾಸದಲ್ಲಿ ಅಳಿಯದ ಛಾಪು ಮೂಡಿಸಿದ್ದಾರೆ. ಅವರ ಆದರ್ಶ, ಆಡಳಿತ ದಕ್ಷತೆ ಹಾಗೂ ಸಮಾಜಮುಖಿ ಚಿಂತನೆಗಳು ಇಂದಿನ ಪೀಳಿಗೆಗೆ ಮಾದರಿಯಾಗಿವೆ. ಆದ್ದರಿಂದ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ಜೀವನ ಸಂದೇಶಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಯಬೇಕು ಎಂದು ಹೇಳಿದರು.
ಜಯಂತಿ ಅಂಗವಾಗಿ ಬೆಳಗ್ಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ, ಪುಷ್ಪಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದದರು.
ತಹಸೀಲ್ದಾರ್ ಕೆ.ಸಿ. ಸೌಮ್ಯಾ, ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ಬಿಇಒ ನಾರಾಯಣ, ತಾಲೂಕು ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಕೆಂಪೇಗೌಡ ಸಂಘಟನೆಗಳ ಮುಖಂಡರು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದು, ಜಯಂತಿ ಆಚರಣೆ ಕುರಿತು ತಮ್ಮ ಸಲಹೆಗಳನ್ನು ನೀಡಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net