ಏಪ್ರಿಲ್ 21, ಸರ್ಕಾರಿ ನೌಕರರ ದಿನಾಚರಣೆಯ ದಿನದಂದೇ ಈ ನಿಯಮವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಭಾ.ಆ.ಸೇ.,ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.