ಗೋಕಾಕ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗಣ್ಯರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಲಖನ್ ಜಾರಕಿಹೊಳಿ, ಡಾ.ದೀಪಮಾಲಾ ಪಾಟೀಲ, ಸಂಧ್ಯಾ ಜಾರಕಿಹೊಳಿ, ಸದಾನಂದ ಕಲಾಲ ಇತರರಿದ್ದರು.
Published on:
Copied
Follow Us
ಗೋಕಾಕ: ಸ್ಪರ್ಧಾತ್ಮಕ ಯುಗದಲ್ಲಿ ಶಿಣ ಮಹತ್ತರ ಪಾತ್ರ ವಹಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಅಧ್ಯ ಲಖನ್ ಜಾರಕಿಹೊಳಿ ಹೇಳಿದರು.
ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಪಾಲಕರು ಮಕ್ಕಳಿಗೆ ಶಿಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂದರು.
ಬೆಂಗಳೂರಿನ ವೈದ್ಯಾಧಿಕಾರಿ ಡಾ.ದೀಪಮಾಲಾ ಪಾಟೀಲ ಮಾತನಾಡಿ, ವಿದ್ಯೆ ವಿಶೇಷ ಸಂಪತ್ತಾಗಿದ್ದು ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ವಿದ್ಯೆಗೆ ಮಹತ್ವ ನೀಡಿ ಉನ್ನತ ಹುದ್ದೆ ಪಡೆದುಕೊಳ್ಳುವಂತೆ ತಿಳಿಸಿದರು.
ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಮುಖ್ಯಶಿಕ್ಷಕ, ಶಿಕರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಥೆಯ ಉಪಾಧ್ಯೆ ಸಂಧ್ಯಾ ಜಾರಕಿಹೊಳಿ, ಕಾರ್ಯದರ್ಶಿ ಸದಾನಂದ ಕಲಾಲ, ನಿರ್ದೇಶಕ ವಿನಾಯಕ ಚಿಪ್ಪಲಕಟ್ಟಿ, ಆಡಳಿತಾಧಿಕಾರಿ ಎಸ್.ಡಿ.ಮುರಗೋಡ, ಮುಖ್ಯಶಿಕ್ಷಕ ಸುಚಿತ್ರಾ ಹತಪಾಕಿ ಇದ್ದರು.