ನಗರಸಭೆ ಆಯುಕ್ತರಾದ ನವೀನ್ ಚಂದ್ರ ಮಾತನಾಡಿ, ಈಗಾಗಲೇ ಕೋಲಾರ ನಗರದಲ್ಲಿ ಪ್ರತಿನಿತ್ಯ ಸ್ವಚ್ಛತಾ ಕಾರ್ಯವನ್ನು ಸಮುದಾಯ ಸಂಘಟಿಕರು ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅದರೊಂದಿಗೆ ಭಾನುವಾರ ನಗರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದು, ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳು ಉದ್ಯಾನವನಗಳನ್ನು ಸ್ವಚ್ಛ ಮಾಡಲಾಗುವುದು ಎಂದು ತಿಳಿಸಿದರು.