ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್), ಕಿರಿಯ ಇಂಜಿನಿಯರ್ (ಮೆಕಾನಿಕಲ್) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸಿವಿಲ್ ವಿಭಾಗದಲ್ಲಿ 258 ಅಭ್ಯರ್ಥಿಗಳ ಪಟ್ಟಿಯನ್ನು ನೀಡಿದ್ದರೆ, ಮೆಕಾನಿಕಲ್ ವಿಭಾಗದಲ್ಲಿ 27 ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಜತೆಗೆ ಆಯಾ ವರ್ಗಕ್ಕೆ ನಿಗದಿಪಡಿಸಲಾಗಿರುವ ಕಟ್-ಆ್ ಅಂಕಗಳ ಮಾಹಿತಿಯನ್ನು ನೀಡಲಾಗಿದೆ. ಒಟ್ಟು 300 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು.