ಕೃಷ್ಣಾ ನದಿಗೆ ಹೆಚ್ಚಿದ ಒಳ ಹರಿವು

ಮಹಾ ಮಳೆಗೆ ಹೆಚ್ಚಿದ ಕೃಷ್ಣಾ ನದಿ ನೀರು
ಮಹಾ ಮಳೆಗೆ ಹೆಚ್ಚಿದ ಕೃಷ್ಣಾ ನದಿ ನೀರು
Published on

ಪ್ರಮುಖ ಮುಖ್ಯಾಂಶಗಳು

  • ಮಹಾ ಮಳೆಗೆ ಹೆಚ್ಚಿದ ನದಿ ನೀರು
  • ಕೃಷ್ಣಾ ನದಿ ಒಳ ಹರಿವು ಹೆಚ್ಚಳ
  • ಬೆಳಗಾವಿ ಜಿಲ್ಲೆಯ ನದಿಗಳ ನೀರು ಹೆಚ್ಚಳ
ಮಹಾ ಮಳೆಗೆ ಹೆಚ್ಚಿದ ಕೃಷ್ಣಾ ನದಿ ನೀರು
| 60 ಸಾವಿರ ಕ್ಯೂಸೆಕ್ ಒಳ ಹರಿವು
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:

ಮಹಾರಾಷ್ಟದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾದಲ್ಲಿ ೬೭ ಮಿಮೀ, ನವಜಾದಲ್ಲಿ ೮೫ ಮಿಮೀ ಮತ್ತು ಮಹಾಬಲೇಶ್ವರದಲ್ಲಿ ೭೮ ಮಿಮೀ. ಮಳೆಯಾಗಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 48 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ, ಜೊತೆಗೆ ವೇದಗಂಗಾ ಮತ್ತು ದೂಧಗಂಗಾ ನದಿ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ ಮಂಗಳವಾರ ಒಟ್ಟು 60 ಸಾವಿರ ಕ್ಯೂಸೆಕ್ ಒಳ ಹರಿವು ಸೇರಿದೆ.
ಕೆಳ ಹಂತದ 6 ಸೇತುವೆ ಮುಳುಗಡೆ:
ಮಹಾ ಮಳೆಯಿಂದ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಿರುವ ಪರಿಣಾಮ ಚಿಕ್ಕೋಡಿ ತಾಲೂಕಿನ ಯಡೂರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ, ವೇದಗಂಗಾ ನದಿಗೆ ಅಡ್ಡ ನಿರ್ಮಿಸಿರುವ ನಿಪ್ಪಾಣಿ ತಾಲೂಕಿನ ಭೋಜ-ಕಾರದಗಾ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಹುನ್ನರಗಿ-ಮಮದಾಪುರ,ಬಾರವಾಡ-ಕುನ್ನೂರ ಸೇತುವೆಗಳು ಜಲಾವೃತಗೊಂಡಿದ್ದು, ಒಂದೇ ತಿಂಗಳಿನಲ್ಲಿ ಎರಡನೇ ಬಾರಿ ಮುಳುಗಡೆಯಾಗಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net