ಜಿಲ್ಲೆಯಲ್ಲಿ ತಗ್ಗಿದ ಮಳೆ
| ಕೃಷ್ಣಾ ನದಿ ನೀರಿನ ಮಟ್ಟ ಕೊಂಚ ಇಳಿಕೆ | ನದಿ ತೀರದ ನೀರಾಳ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟçದ ಕೊಂಕಣ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದೆ. ಕೃಷ್ಣಾ ನದಿ ಒಳ ಹರಿವಿನಲ್ಲಿ ಶನಿವಾರ ಇಳಿಕೆ ಕಂಡಿದೆ.
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುವುದಿಲ್ಲ ರಾಜಾಪೂರ ಬ್ಯಾರೇಜ್ ಮೂಲಕ ಕೃಷ್ಣಾ ನದಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿತ್ತು. ಪರಿಣಾಮ ನದಿಯಿಂದ ಕೆಲವು ಕೆಳ ಹಂತದ ಸೇತುವೆಗಳು ಮುಳುಗಡೆವು. ಆದರೆ ಕಳೆದ ದಿನದಿಂದ ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟçದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ, ನದಿಗಳ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ.
ರಾಜಾಪುರ ಬ್ಯಾರೇಜ ಮೂಲಕ ಹಾಗೂ ವೇದಗಂಗಾ ದೂಧಗಂಗಾ ನದಿಗಳ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಶನಿವಾರ 85 ಸಾವಿರ ಕ್ಯೂಸೆಕ್ ಒಳ ಹರಿವು ದಾಖಲಾಗಿದ್ದು, ನದಿಗಳ ನೀರಿನ ಮಟ್ಟ ಇಳಿಕೆಯಿಂದ ನದಿ ಪಾತ್ರದ ಜನರು ನೀರಾಳರಾಗಿದ್ದಾರೆ.