ಬೆಂ.ದಕ್ಷಿಣ ಜಿಲ್ಲೆಗೆ ಕುಣಿಗಲ್​ ಸೇರ್ಪಡೆ ಚರ್ಚೆ ನಡೆದಿಲ್ಲ DKC district

 DKC kunigalಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್​ ಕಾರ್ಯಕರ್ತರು ಕುಣಿಗಲ್​ ತಾಲೂಕಿನ ಹಳೆವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಿಗೆ ನವಚಂಡಿಕಾ ಮಹಾಯಾಗ ನರವೇರಿಸಿದರು.
DKC kunigalಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್​ ಕಾರ್ಯಕರ್ತರು ಕುಣಿಗಲ್​ ತಾಲೂಕಿನ ಹಳೆವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಿಗೆ ನವಚಂಡಿಕಾ ಮಹಾಯಾಗ ನರವೇರಿಸಿದರು.
Published on
DKC kunigal ಹುಲಿಯೂರುದುರ್ಗ: ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಕಾಂಗ್ರೆಸ್​ ಕಾರ್ಯಕರ್ತರು ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಳೆವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಮಂಗಳವಾರ ಶೃಂಗೇರಿ ಮಹಾಸಂಸ್ಥಾನ ಮಠದ ಪೂಜ್ಯರಿಂದ ನವಚಂಡಿಕಾ ಮಹಾಯಾಗ ಮತ್ತು ವಿಶೇಷ ಪೂಜೆ ನಡೆಸಿದರು
ಡಿಕೆಶಿ ಮುಖ್ಯಮಂತ್ರಿಯಾಗಲಿ ಹಾಗೂ ತಾಲೂಕು ಅಭಿವೃದ್ಧಿಯಾಗಲಿ ಎಂದು ಮುಖಂಡರು ಹಾಗೂ ಬೆಂಲಿಗರು ಪ್ರಾರ್ಥಿಸಿದರು. ಶಾಸಕ ಡಾ.ರಂಗನಾಥ್​ ಭಾಗವಹಿಸಿ ದೇವಿಗೆ ಪೂಜೆ ಸಲ್ಲಿಸಿ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಶಾಸಕರು, ಮುಂದಿನ ದಿನಗಳಲ್ಲಿ ತಾಲೂಕಿಗೆ ಕೈಗಾರಿಕೆಗಳನ್ನು ತರಲು ಶ್ರಮಿಸುತ್ತೇನೆ. ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಣಿಗಲ್​ ತಾಲೂಕು ಸೇರ್ಪಡೆ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೆ ಚರ್ಚೆ ನಡೆದಿಲ್ಲ. ಬೆಂಗಳೂರಿನ ಅನಿವಾಸಿಗಳ ಚರ್ಚೆಯಷ್ಟೇ. ಕ್ಷೇತ್ರ ಮರು ವಿಂಗಡಣೆಯಾಗುವ ಸಂದರ್ಭದಲ್ಲಿ ಈ ರೀತಿಯ ಮಾತುಗಳು ಕೇಳಿ ಬರುತ್ತಿವೆ.ಆಗ ತಾಲೂಕಿನ ಜನತೆಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ತಾಲೂಕಿನ ಅಭಿವೃದ್ಧಿ ವಿಷಯದಲ್ಲಿ ತುಮಕೂರು ಜಿಲ್ಲೆಯ ಮುಖಂಡರಿಂದ ನನಗೆ ಸಹಕಾರ ಸಿಗುತ್ತಿಲ್ಲ. ಮುಖ್ಯಂತ್ರಿಗಳ ಬಳಿ ಈ ಬಗ್ಗೆ ಚರ್ಚಿಸಿದ್ದೇನೆ. ಸುಧಾರಣೆ ತರುವುದಾಗಿ ತಿಳಿಸಿದ್ದಾರೆ ಎಂದರು.
ದೆಹಲಿ ಸ್ಫೋಟದ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಭದ್ರತೆ ವಿಷಯದಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೋಳ್ಳಬೇಕು. ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಎಂದು ತನಿಖೆಯಿಂದ ಬೆಳಕಿಗೆ ಬರಬೇಕಿದೆ. ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದರು.\
ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಧುಸೂದನ್​, ಯುತ್​ ಕಾಂಗ್ರೆಸ್​ ಅಧ್ಯಕ್ಷ ಸಂತೋಷ್​ ಜಯರಾಮಯ್ಯ, ಹಳೆವೂರು ಗ್ರಾಪಂ ಅಧ್ಯಕ್ಷ ಬೀಚನಹಳ್ಳಿ ಶ್ರೀನಿವಾಸ್​, ಸದಸ್ಯ ನಾಗೇಶ್​ ಹಾಗೂ ಮುಖಂಡರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net