ವಿವಿಧ ಕ್ಷೇತ್ರಗಳ ಸಾಧಕರಿಗೆ 'ಕುಶಾಗ್ರಮತಿ ಖರ್ಗೆ' ಪ್ರಶಸ್ತಿ ಪ್ರದಾನ

,
,
Published on
ಕಲಬುರಗಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 85ನೇ ಜನ್ಮದಿನದ ಅಂಗವಾಗಿ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ನಗರದ ಸೂಪರ್ ಮಾರ್ಕೆಟ್‌ನ ಕೆಕೆಸಿಸಿಐಯ ಶ್ರೀನಿವಾಸರಾವ ರಥೋಜಿ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ 'ಕುಶಾಗ್ರಮತಿ ಖರ್ಗೆ' ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಪೂಜ್ಯ ಹವಾ ಮಲ್ಲಿನಾಥ ಮಹಾರಾಜರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಬಸವರಾಜ ದೇಶಮುಖ, ಶರಣಬಸಪ್ಪ ಪಪ್ಪಾ, ರಾಜು ದೇಶಮುಖ, ಲಕ್ಷ್ಮೀನಾರಾಯಣ ಮನೋಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದ ಅಧ್ಯಕ್ಷ ಶಾಂತರೆಡ್ಡಿ ಪೇಠಶೀರೂರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಾಜ, ಶಿಕ್ಷಣ, ವೈದ್ಯಕೀಯ, ಕಲೆ, ಸಾಹಿತ್ಯ, ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಉಮಾಕಾಂತ ನಿಗ್ಗುಡಗಿ, ಡಾ. ಶಿವಪುತ್ರಪ್ಪ ಹರವಾಳ, ಪ್ರಭಾಕರ ಜೋಶಿ, ರಾಘವೇಂದ್ರ ಮೈಲಾಪುರ, ಲಕ್ಷ್ಮಣ ದಸ್ತಿ, ನಜೀರ್ ಮಿಯಾನ್ ಹಟ್ಟಿ, ಡಾ. ಲಕ್ಷ್ಮೀ ಪಾಟೀಲ ಮಾಕಾ, ವೈಷ್ಣವಿ ಎಸ್. ಅಹಂಕಾರಿ, ಸರೇಖಾ ಹೊನಗುಂಟಾ, ಸೋಮಶೇಖರ ಬಣಗಾರ ಸೊನ್ನ, ದಯಾನಂದ ಮನೋಕರ್ ಹಾಗೂ ಶಿವು ಹಳ್ಳಿಖೇಡ ಅವರಿಗೆ 'ಕುಶಾಗ್ರಮತಿ ಖರ್ಗೆ' ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಪ್ರಶಸ್ತಿ ಪುರಸ್ಕೃತರನ್ನು ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕ ನೀಡಿ ಅಭಿನಂದಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರು, ಅಭಿಮಾನಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net