ಈ ಕುರಿತು ಮಾಹಿತಿ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ. ಜು. 25ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.