ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.