ಶಿಕ್ಷಕರ ಕೊರತೆಯಿಂದ ಕಲಿಕೆಗೆ ಹಿನ್ನಡೆ

ದೇವದುರ್ಗದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿತು. ಮುಖಂಡರಾದ ಶಾಂತಕುಮಾರ ಹೊನ್ನಟಗಿ, ರಾಜಪ್ಪ ಸಿರವಾರಕರ್, ಮುತ್ತುರಾಜ್ ಮ್ಯಾತ್ರಿ ಗಬ್ಬೂರು ಇದ್ದರು.
ದೇವದುರ್ಗದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿತು. ಮುಖಂಡರಾದ ಶಾಂತಕುಮಾರ ಹೊನ್ನಟಗಿ, ರಾಜಪ್ಪ ಸಿರವಾರಕರ್, ಮುತ್ತುರಾಜ್ ಮ್ಯಾತ್ರಿ ಗಬ್ಬೂರು ಇದ್ದರು.
Published on
ದೇವದುರ್ಗ: ಪ್ರಸಕ್ತ ಸಾಲಿನಲ್ಲಿ ಶಾಲೆ, ಕಾಲೇಜುಗಳು ಆರಂಭವಾಗಿದ್ದರಿಂದ ಶಿಕ್ಷಕರ ಕೊರತೆ ನೀಗಿಸಲು ತಕ್ಷಣವೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಬಿಇಒ ಕಚೇರಿಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಶನಿವಾರ ಮನವಿ ಸಲ್ಲಿಸಿತು.
 ಹೊನ್ನಟಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಕಳೆದ ವರ್ಷ ಅವೈಜ್ಞಾನಿಕ ವರ್ಗಾವಣೆಯಿಂದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. 
ಹಲವು ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲದೆ ಮಕ್ಕಳ ದಾಖಲಾತಿ ಕುಸಿಯುತ್ತಿದೆ. ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿದರು. 
ಕೂಡಲೇ ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ತಕ್ಷಣವೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಶಾಲೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. 
ಮುಖಂಡರಾದ ಶಾಂತಕುಮಾರ ಹೊನ್ನಟಗಿ, ರಾಜಪ್ಪ ಸಿರವಾರಕರ್, ಮುತ್ತುರಾಜ್ ಮ್ಯಾತ್ರಿ ಗಬ್ಬೂರು ಇದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net