ಇಂಡಿ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಗಾಣಿಗ ಸಮಾಜದ ಮುಖಂಡರು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಎ.ಎಸ್. ಗಾಣಿಗೇರ ಮಾತನಾಡಿದರು. ಸುಭಾಷ ಹಿಟ್ನಳ್ಳಿ, ಬಿ.ಎಸ್. ಅವಜಿ, ಅಪ್ಪು ಕಲ್ಲೂರ, ಮಲಕಣ್ಣ ಜಂಬಗಿ, ಭೀಮನಗೌಡ ಪಾಟೀಲ, ಪ್ರದೀಪ ಉಟಗಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಗಾಣಿಗ ಸಮಾಜದ ತಾಲೂಕು ಅಧ್ಯಕ್ಷ ಎ.ಎಸ್. ಗಾಣಿಗೇರ ಆಗ್ರಹ
ಸಚಿವ ಸ್ಥಾನ ನೀಡುವಂತೆ ಆಗ್ರಹ
ಇಂಡಿ: ಗಾಣಿಗ ಸಮುದಾಯದ ರಾಜ್ಯಮಟ್ಟದ ನಾಯಕ ಹಾಗೂ ಬೆಳಗಾವಿ ಜಿಲ್ಲೆಯ ಹಿರಿಯ ಶಾಸಕ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರ ಪರಿಣಾಮ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ಭಾಗಗಳಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗಿದೆ ಎಂದು ಗಾಣಿಗ ಸಮಾಜದ ತಾಲೂಕು ಅಧ್ಯಕ್ಷ ಎ.ಎಸ್. ಗಾಣಿಗೇರ ಹೇಳಿದರು.
ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಗಾಣಿಗ ಸಮಾಜದ ಮುಖಂಡರು ಬುಧವಾರ ಹಮ್ಮಿಕೊಂಡಿದ್ದ ಸುದ್ದಿ ಗೋಷ್ಠಿಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ ಸರ್ಕಾರ ರಚನೆ ವೇಳೆ ಉನ್ನತ ಸ್ಥಾನ ನೀಡುವುದಾಗಿ ತಿಳಿಸಿದ್ದರು. ಕೊಟ್ಟ ಮಾತಿನಂತೆ ನಡೆದುಕೊಂಡು ಅವರನ್ನು ಬರುವ ಸಂಪುಟ ಪುನರ್ರಚನೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಸತತ ಮೂರು ಬಾರಿ ಆಯ್ಕೆಯಾಗಿದ್ದು, ಜಾತ್ಯತೀತ ನಾಯಕರಾಗಿದ್ದಾರೆ. ಅವರ ಹಿರಿತನ ಹಾಗೂ ದೂರ ದೃಷ್ಟಿ, ಅಭಿವೃದ್ಧಿಗೆ ಕಾರ್ಯಗಳನ್ನು ಗಮನಿಸಿ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದರು.
ಸುಭಾಷ ಹಿಟ್ನಳ್ಳಿ, ಬಿ.ಎಸ್. ಅವಜಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಗಾಣಿಗ ಸಮಾಜವು ದೊಡ್ಡ ಸಂಖ್ಯೆಯಲ್ಲಿದ್ದು, ರಾಜಕೀಯವಾಗಿ ಸಮಾಜಕ್ಕೆ ಪ್ರಾತಿನಿಧ್ಯ ನೀಡುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ಅಪ್ಪು ಕಲ್ಲೂರ, ಮಲಕಣ್ಣ ಜಂಬಗಿ, ಭೀಮನಗೌಡ ಪಾಟೀಲ, ಪ್ರದೀಪ ಉಟಗಿ ಇತರರಿದ್ದರು.