ರಾಜ್ಯ ಸರ್ಕಾರವು ಕೈಗಾರಿಕೆಗಳ ಹೆಸರಿನಲ್ಲಿ ರೈತರ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ. ಕಳೆದ 20 ವರ್ಷಗಳಲ್ಲಿ ಸ್ವಾಧಿನಪಡಿಸಿಕೊಂಡ ಲಾಂತರ ಎಕರೆ ಭೂಮಿಯಲ್ಲಿ ಕೇವಲ ಶೇ.25 ರಷ್ಟು ಮಾತ್ರ ಕೈಗಾರಿಕೆಗಳಿಗೆ ಬಳಕೆಯಾಗಿದೆ. ಇದು ಹಗಲು ದರೋಡೆಯಾಗಿದೆ. ಶಿಡ್ಲಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,823 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಇಲ್ಲಿನ ರೈತರು ಹೂವು, ಹಣ್ಣು, ತರಕಾರಿ, ಮಾವು, ಗೋಡಂಬಿ, ರೇಷ್ಮೆ, ತೆಂಗು ಮತ್ತು ಅಡಿಕೆಯನ್ನು ಪ್ರಮುಖವಾಗಿ ಬೆಳೆಯುತ್ತಿದ್ದಾರೆ. ಇಂತಹ ಸಮೃದ್ಧ ಭೂಮಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.