ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಲ್ಯಾಪಟಾಪ್‌ ವಿತರಣೆ

,
,
Published on
ಕಲಬುರಗಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಲ್ಯಾಪಟಾಪ್ ವಿತರಣೆ ಯೋಜನೆಯಡಿ ಆಯ್ಕೆಯಾದ ಸಫಾಯಿ ಕರ್ಮಚಾರಿ (ಪೌರಕಾರ್ಮಿಕ) ಹಾಗೂ ಮ್ಯಾನ್ಯುಯಲ್ ಅವರ ನಾಲ್ವರು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್ ಅವರು ಬುಧವಾರ ತಮ್ಮ ಕಚೇರಿಯಲ್ಲಿ ಲ್ಯಾಪಟಾಪ್ ವಿತರಿಸಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಫಾಯಿ ಕರ್ಮಚಾರಿಗಳ ರಾಜ್ಯ ಮೇಲ್ವಿಚಾರಣಾ ಸಮಿತಿಯ ಸದಸ್ಯರು, ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ‌ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net