ಬೆಣ್ಣಂಗೂರಲ್ಲಿ ಲಾವಣ್ಯ ಅಂತ್ಯಕ್ರಿಯೆ

Lavanya's funeral in Bennangoor
Lavanya's funeral in Bennangoor
Published on
ಚಿಂತಾಮಣಿ: ಬೆಸ್ಕಾಂ ಜಾಗೃತ ದಳದ ಪೊಲೀಸ್​ ಅಧೀಕ್ಷಕರಾಗಿದ್ದ 2012ರ ಬ್ಯಾಚ್​ನ ಐಪಿಎಸ್​ ಅಧಿಕಾರಿ ಬಿ.ಎನ್‘.ಲಾವಣ್ಯ (39) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಕೋಲಾರ ತಾಲೂಕಿನ ಶ್ರೀನಿವಾಸಪುರ ರಸ್ತೆ ಬೆಣ್ಣಂಗೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆಯಿತು.
ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದ ಬ್ಲಾಕ್​ ಡೆವಲಪ್​ಮೆಂಟ್​ ನಿವೃತ್ತ ಅಧಿಕಾರಿ ಜಿ.ಎಚ್​. ನಾರಾಯಣಸ್ವಾಮಿ ಅವರ ಪುತ್ರಿ ರತ್ನಮಂಜುಳಾರನ್ನು ಬೆಣ್ಣಂಗೂರು ಗ್ರಾಮದ ನಾರಾಯಣಪ್ಪ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಯ ಪುತ್ರಿ ಲಾವಣ್ಯ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ತಾಯಿಯ ತವರೂರಾದ ದೊಡ್ಡಗಂಜೂರಿಗೆ ಆಗಾಗ ಬಂದು ಹೋಗುತ್ತಿದ್ದರು. ಅವರ ಅಗಲಿಕೆಗೆ ದೊಡ್ಡಗಂಜೂರಿನ ಅವರ ಸಂಬಂಧಿಕರು, ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.
ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ: ಬೆಳ್ಳಂಗೂರು ಗ್ರಾಮದಲ್ಲಿ ಜಿಲ್ಲಾ ಪೊಲೀಸ್​ ಇಲಾಖೆಯಿಂದ ಗೌರವ ಸಲ್ಲಿಸಲಾಯಿತು. ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ಹಾಗೂ ಲಾವಣ್ಯ ಪತಿ ಡಾ. ಪುರುಷೋತ್ತಮ್​ ಸೇರಿದಂತೆ ಅವರ ಕುಟುಂಬ ವರ್ಗದವರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net