ವಕೀಲರು, ನ್ಯಾಯಾಧೀಶರು ಜೋಡೆತ್ತುಗಳಿದ್ದಂತೆ

ಭಾಲ್ಕಿಯ ವಕೀಲರ ಸಂದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ  ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕಿರಿಯ ಶ್ರೇಣಿಯ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಕುಟುಂಬದವರನ್ನು ಸನ್ಮಾನಿಸಲಾಯಿತು. ಹಿರಿಯ ಶ್ರೇಣಿ ನ್ಯಾಯಾಧೀಶ ರಾಜಶೇಖರ ಹೊಸರು, ವಕೀಲರ ಸಂದ ಅಧ್ಯಕ್ಷ ಮಹೇಶ ರಾಚೋಟೆ, ಉಪಾಧ್ಯಕ್ಷ ಮಕರಂದ ಮಾನಕಾರಿ, ಪ್ರಧಾನ ಕಾರ್ಯದರ್ಶಿ ವಾಗೇಶ ಪಾಟೀಲ್​, ಜಂಟಿ ಕಾರ್ಯದರ್ಶಿ ನೀಲಕಂಠ ಬಿರಾದಾರ್​ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಹೇಶ ರಾಚೋಟೆ ಅಭಿಮತ
  • ಭಾಲ್ಕಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ
ಭಾಲ್ಕಿ: ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರು ಮತ್ತು ನ್ಯಾಯಾಧೀಶರು ಜೋಡೆತ್ತುಗಳಿದ್ದಂತೆ. ಇವರಿಬ್ಬರ ಪರಸ್ಪರ ಸಹಕಾರ ಮತ್ತು ಸಮನ್ವಯದ ನಡಿಗೆಯಿಂದ ಮಾತ್ರ ಸಾರ್ವಜನಿಕರಿಗೆ ನಿಷ್ಪಕ್ಷಪಾತ ಹಾಗೂ ಶ್ರೀ ನ್ಯಾಯದಾನದ ಗಾಡಿಯನ್ನು ಮುನ್ನಡೆಸಲು ಸಾಧ್ಯ ಎಂದು ತಾಲೂಕು ವಕೀಲರ ಸಂದ ಅಧ್ಯಕ್ಷ ಮಹೇಶ ರಾಚೋಟೆ ಹೇಳಿದರು.
ತಾಲೂಕು ವಕೀಲರ ಸಂದ ಸಭಾ ಭವನದಲ್ಲಿ ತಾಲೂಕು ವಕೀಲರ ಸಂದಿಂದ ಹಮ್ಮಿಕೊಂಡಿದ್ದ ಕಿರಿಯ ಶ್ರೇಣಿ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯ ಶ್ರೇಣಿ ನ್ಯಾಯಾಧೀಶ ರಾಜಶೇಖರ ಹೊಸೂರು ಕಾರ್ಯಕ್ರಮ ಉದ್ಘಾಟಿಸಿದರು.
ಸನ್ಮಾನ ಸ್ವೀಕರಿಸಿ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಮಾತನಾಡಿ, ತಾಲೂಕಿನ ವಕೀಲರ ವೃತ್ತಿಪರತೆ ಮತ್ತು ಇಲ್ಲಿನ ಅತ್ಯುತ್ತಮ ನ್ಯಾಯ ಸೇವೆಯನ್ನು ನೋಡಿ ನನಗೆ ಅಪಾರ ಸಂತೋಷವಾಗಿದೆ. ಇಲ್ಲಿನ ವಕೀಲರ ಸಂದ ಸಹಕಾರ ಸ್ಮರಣೀಯ ಎಂದು ಬಣ್ಣಿಸಿದರು.
ತಾಲೂಕು ವಕೀಲರ ಸಂದ ಉಪಾಧ್ಯಕ್ಷ ಮಕರಂದ ಮಾನಕಾರಿ, ಪ್ರಧಾನ ಕಾರ್ಯದರ್ಶಿ ವಾಗೇಶ ಪಾಟೀಲ್​, ಜಂಟಿ ಕಾರ್ಯದರ್ಶಿ ನೀಲಕಂಠ ಬಿರಾದಾರ್​ ಸೇರಿ ತಾಲೂಕಿನ ವಕೀಲರ ಸಂದ ಪದಾಧಿಕಾರಿಗಳು ಮತ್ತು ವಕೀಲರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net