ಸಾಮಾಜಿಕ ಮಾಧ್ಯಮ ಮತ್ತು ಇತರೆಡೆ ರೀಲ್ಸ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪರಿಶೀಲನಾ/ಮಧ್ಯಸ್ಥಿಕೆ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಲಾಗಿದೆ. ವಕೀಲರಾದ ವಿನಯ್‌ಕುಮಾರ್, ಜಿ ಮಂಜುನಾಥ್, ರೇಣುಕಾ ದೇವಿ ಅಲಿಯಾಸ್ ರೇಣುಕಾ ಹಿರೇಮಠ, ವಿ ರವಿಕುಮಾರ್ ಮತ್ತು ಎನ್ ಪುಟ್ಟೇಗೌಡ ಅವರ ವಿರುದ್ಧ ತನಿಖೆ ಬಾಕಿ ಉಳಿಸಿ ಸನ್ನದು ಅಮಾನತುಗೊಳಿಸಲಾಗಿದೆ ಎಂದು ಕೆಎಸ್‌ಬಿಸಿ ನಿರ್ಣಯದಲ್ಲಿ ತಿಳಿಸಿದೆ.