ಶಿಕ್ಷಣದೊಂದಿಗೆ ಬ್ಯಾಂಕಿನ ವ್ಯಾವಹಾರ ತಿಳಿದುಕೊಳ್ಳಿ

Learn about banking with education
Learn about banking with education
Published on
ಚಿಕ್ಕನಾಯಕನಹಳ್ಳಿ: ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು. ಆದ್ದರಿಂದ ದೇಶದ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಓದುವುದರ ಜತೆಗೆ ಬ್ಯಾಂಕಿನ ವ್ಯವಹಾರ ಜ್ಞಾನವನ್ನು ತಿಳಿದುಕೊಳ್ಳುವುದು ತುಂಬಾ ಅನಿವಾರ್ಯವಾಗಿದೆ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ಟಿ.ಎಸ್.ಶಂಕರ್ ರಾವ್ ತಿಳಿಸಿದರು.
ಪಟ್ಟಣದ ಪಿಎಂಶ್ರೀ ಶಾಲೆ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರ ಸಹಯೋಗದಲ್ಲಿ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಆರ್ಥಿಕ ಸಾಕ್ಷರತಾ ಶಿಬಿರದಲ್ಲಿ ವಾತನಾಡಿದ ಅವರು, ಶಿಕ್ಷಣದೊಂದಿಗೆ ಬ್ಯಾಂಕಿನ ವ್ಯಾವಹಾರದ ಬಗ್ಗೆಯು ತಿಳಿದುಕೊಳ್ಳುವ ಮೂಲಕ ನಿಮ್ಮ ಭವಿಷ್ಯದಲ್ಲಿ ಅನುಕೂಲವಾಗಲಿದೆ ಎಂದರು.
ಸಿಆರ್‌ಪಿ ಯೋಗೇಶ್ ವಾತನಾಡಿ, ಪಾಲಕರು ಮಕ್ಕಳ ಖರ್ಚಿಗೆ ಕೊಡುವ ಹಣದಲ್ಲಿ ಅನಾವಶ್ಯಕ ಖರ್ಚು ವಾಡದೆ, ಉಳಿಸಿ, ಹಣವನ್ನು ಸಮಯಕ್ಕೆ ತಕ್ಕ ಹಾಗೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ. ಕುವಾರಸ್ವಾಮಿ, ಭಾರತೀಯ ರಿಸರ್ವ್ ಬ್ಯಾಂಕ್, ವಾಣಿಜ್ಯ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಹಾಗೂ ಖಾಸಗಿ ಬ್ಯಾಂಕುಗಳ ಬಗ್ಗೆ ವಿವರಣೆ ನೀಡುತ್ತಾ ಬ್ಯಾಂಕುಗಳಲ್ಲಿ ಲಭ್ಯವಿರುವ ಉಳಿತಾಯ, ಚಾಲ್ತಿ, ಆವರ್ತ ,ನಿಶ್ಚಿತ ಠೇವಣಿ ಮುಂತಾದ ಖಾತೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net