ಪಠ್ಯದ ಜೊತೆ ಉತ್ತಮ ಸಂಸ್ಕಾರ ಕಲಿಯಿರಿ

ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಸೋಮವಾರ ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ ಮತ್ತು ಸಮವಸöಗಳನ್ನು ಶಾಸಕ ಉಮೇಶ ಮೇಟಿ ವಿತರಿಸಿದರು. ಜಿಲ್ಲಾಽಕಾರಿ ಸಂಗಪ್ಪ ಹಾಗೂ ಇಲಾಖೆ ಅಽಕಾರಿಗಳು ಮತ್ತು ಸ್ಥಳೀಯ ಮುಖಂಡರು ಇದ್ದರು.
ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಸೋಮವಾರ ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ ಮತ್ತು ಸಮವಸöಗಳನ್ನು ಶಾಸಕ ಉಮೇಶ ಮೇಟಿ ವಿತರಿಸಿದರು. ಜಿಲ್ಲಾಽಕಾರಿ ಸಂಗಪ್ಪ ಹಾಗೂ ಇಲಾಖೆ ಅಽಕಾರಿಗಳು ಮತ್ತು ಸ್ಥಳೀಯ ಮುಖಂಡರು ಇದ್ದರು.
Published on
ಬಾಗಲಕೋಟೆ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು, ಸಮಯಪಾಲನೆ ಮತ್ತು ಸಾಮಾಜಿಕ ಮೌಲ್ಯಗಳನ್ನು ಕಲಿಯಬೇಕು ಎಂದು ಶಾಸಕ ಉಮೇಶ ಮೇಟಿ ಸಲಹೆ ನೀಡಿದರು.
ಜಿಲ್ಲಾದ್ಯಂತ ಸೋಮವಾರ ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾರಂಭವಾದ ಹಿನ್ನೆಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ತಾಲೂಕಿನ ತಿಮ್ಮಾಪುರ ಮತ್ತು ಬೇವಿನಮಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಚಾಲನೆ ಮತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ ಹಾಗೂ ಸಮವಸö ವಿತರಿಸಿ ಮಾತನಾಡಿದರು.
ಪ್ರತಿಯೊಬ್ಬರ ಜೀವನಕ್ಕೆ ಶಿಕ್ಷಣವೂ ಭದ್ರ ಅಡಿಪಾಯವಾಗಿದೆ. ಶಿಕ್ಷಣವೇ ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಪ್ರಮುಖ ಸಾಧನವಾಗಿದೆ. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಪಾಲಕರು ತಮ್ಮ ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸಿ ಅವರ ಶಿಕ್ಷಣದ ಬಗ್ಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು. ಬೇವಿನಮಟ್ಟಿ ಶಾಲೆಗೆ ಶಾಸಕರ ಅನುದಾನದಲ್ಲಿ ಹೆಚ್ಚುವರಿಯಾಗಿ ೨ ಕೊಠಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲಕರ ಕಲಿಕಾ ವಾತಾವರಣ ದೊರೆಯಲಿದೆ ಎಂದ ಅವರು, ಇದೇ ವೇಳೆ ಸ್ಮಾರ್ಟ ಕ್ಲಾಸ್‌ಗೆ ಚಾಲನೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿ, ಶಾಲೆಗಳು ಪಾಠ ಪುಸ್ತಕಗಳ ಜ್ಞಾನ ನೀಡುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಕಲಿಸುತ್ತವೆ. ಶಾಲೆಯ ಪರಿಸರ ಸರಳತೆ, ಸಹನೆ ಶಿಸ್ತನ್ನು ಬೆಳೆಸುತ್ತದೆ. ಸರ್ಕಾರಿ ಶಾಲೆಗಳು ದೇಶದ ಸಾಮಾನ್ಯ ಜನರ ಕನಸುಗಳಿಗೆ ಬುನಾದಿ ಹಾಕುತ್ತವೆ. ಸರಳ ಬದುಕು, ಉನ್ನತ ಚಿಂತನೆ ಇದರ ಮೊದಲ ಪಾಠ ಸರ್ಕಾರಿ ಶಾಲೆಯಲ್ಲಿ ಸಿಗುತ್ತದೆ ಎಂದು ಹೇಳಿ, ಬೇವಿನಮಟ್ಟಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ವಯಕ್ತಿಕವಾಗಿ ೧೦ ಸಾವಿರ ರೂ.ಗಳನ್ನು ಎಸ್‌ಡಿಎಂಸಿ ಖಾತೆಗೆ ಜಮೆ ಮಾಡುವುದಾಗಿ ತಿಳಿಸಿದರು.
ಕಾರ್ಯಕ್ರಮ ಪೂರ್ವದಲ್ಲಿ ತಿಮ್ಮಾಪೂರ ಗ್ರಾಮದಲ್ಲಿ ಶೈಕ್ಷಣಿಕ ವರ್ಷದ ಮೊದಲ ದಿನ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ಸಿಹಿ ವಿತರಿಸುವ ಮೂಲಕ ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರು. ಬೇವಿನಮಟ್ಟಿ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರದ ಹಿನ್ನಲೆಯಲ್ಲಿ ತೆರೆದ ಬಂಡಿಯಲ್ಲಿ ಶಾಸಕರು ಹಾಗೂ ಇತರೆ ಗಣ್ಯಮಾನ್ಯರನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತಂದು ಆರತಿ ಮಾಡುವ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಯಿತು.
ತಿಮ್ಮಾಪೂರದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಪಿಕೆಪಿಎಸ್ ಅಧ್ಯಕ್ಷ ಮುತ್ತಪ್ಪ ಹುಗ್ಗಿ, ಗ್ರಾಪಂ ಸದಸ್ಯ ಸಂಗನಗೌಡ ಪಾಟೀಲ, ಎಸ್‌ಡಿಎಂಸಿ ಸದಸ್ಯ ಮಹಾದೇವಪ್ಪ ಕುಂಬಾರ ಇದ್ದರೆ, ಬೇವಿನಮಟ್ಟಿ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ಸಮನ್ವಯಾಽಕಾರಿ ಪ್ರಮೋದಿನಿ ಬಲೂಲವಾಡಿ, ತಾಪಂ ಕಾರ್ಯನಿರ್ವಾಹಕ ಅಽಕಾರಿ ಸುಭಾಷ ಸಂಪಗಾವಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾದ್ಯಾಯ ಲಕ್ಷಿ÷್ಮÃದೇವಿ ಮುಂಡವಾಡಿ, ಪ್ರಾಥಮಿಕ ವಿಭಾಗದ ಮುಖ್ಯೋಪಾದ್ಯಾಯ ಎಂ.ಪಿ.ಕುದರಿ, ಬಿಆರ್‌ಸಿ ಸಿ.ವೈ ಸಂಗಮ, ದೈಹಿಕ ಶಿಕ್ಷಣ ಅಽಕಾರಿ ಆರ್.ಆರ್.ಪಾಟೀಲ, ಮುಖಂಡರಾದ ದ್ಯಾಮಣ್ಣ ಗಾಳಿ, ನಾಗರಾಜ ಹದ್ಲಿ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net