ಗುಬ್ಬಿ ತಾಲೂಕಿನ ಅಳಿಲಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ಇಡೀ ಜಗತ್ತಿನಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ಇದ್ದು, ಶಾಲಾ ಮಕ್ಕಳು ಪ್ರಾಥಮಿಕ ಹಂತದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಸಮಾಜದಲ್ಲಿ ಒಳ್ಳೆಯ ಗೌರವ ಕಾಪಾಡಬೇಕು. ಶಿಕ್ಷಕರು ಪ್ರತಿ ದಿನಾಚರಣೆಯಲ್ಲಿ ಮಕ್ಕಳ ಕಲಿಕೆಯ ಬಗ್ಗೆ ಗಮನ ಹರಿಸಿ ಕಲಿಕೆಯಿಂದ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಪ್ರಾಥಮಿಕ ಹಂತದಲ್ಲೇ ಶಿಕ್ಷಣವನ್ನು ಕೊಟ್ಟು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.