ಕಲಿಕಾ ಹಬ್ಬ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿ

ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಕಸ್ತೂರು ಬಾ ಗಾಂಧಿ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಸೋಮಣ್ಣ ಮಾತನಾಡಿದರು. ಮಾರಯ್ಯ, ಗುರುಮೂರ್ತಿ ಇತರರು ಇದ್ದರು.
ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಕಸ್ತೂರು ಬಾ ಗಾಂಧಿ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಸೋಮಣ್ಣ ಮಾತನಾಡಿದರು. ಮಾರಯ್ಯ, ಗುರುಮೂರ್ತಿ ಇತರರು ಇದ್ದರು.
Published on
ಯಳಂದೂರು: ಕಲಿಕೆಯ ಮಹತ್ವಾಕಾಂಕ್ಷೆ ತಿಳಿಯುವ ನಿಟ್ಟಿನಲ್ಲಿ ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬವು ವಿದ್ಯಾರ್ಥಿಗಳು ಪೂರಕವಾಗಿದೆ ಎಂದು ಆದರ್ಶ ಶಾಲೆಯ ಮುಖ್ಯಶಿಕ್ಷಕರಾದ ಗುರುಮೂರ್ತಿ ಅಭಿಪ್ರಾಯಪಟ್ಟರು.

ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಕಸ್ತೂರ ಬಾ ಗಾಂಧಿ ವಸತಿ ಶಾಲೆಯಲ್ಲಿ ದುಗ್ಗಹಟ್ಟಿ ಕ್ಲಸ್ಟರ್ ಮಟ್ಟದ ಕಲಿಕಾ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಮಕ್ಕಳನ್ನು ಚೆನ್ನಾಗಿ ನೋಡಿಕೊಂಡು ಬೋಧನೆ ಮಾಡುತ್ತಿದ್ದಾರೆ. ಮನೆಯಲ್ಲಿ ಪಾಲಕರು ಸಹ ಕಾಲ ಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿ ಕಲಿಕೆಗೆ ಅಗತ್ಯವಾದ ವಾತಾವರಣ ನಿರ್ಮಿಸಬೇಕಿದೆ ಎಂದರು.

ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಣ್ಣ ಮಾತನಾಡಿ, ಎರಡು ವರ್ಷಗಳ ಕಾಲ ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆಗೆ ಹಿನ್ನಡೆಯಾಗಿದ್ದು, ಅದನ್ನು ಸರಿದೂಗಿಸಲು ಕಲಿಕಾ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಮಾಡು-ಆಡು, ಹಾಡು, ಕಾಗದ-ಕತ್ತರಿ, ಬಣ್ಣ, ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಾಡುವ ಮೂಲಕ ಗ್ರಾಮೀಣ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಆಸಕ್ತಿಯನ್ನು ಗುರುತಿಸಿ ಉತ್ತೇಜನ ನೀಡಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಗ್ರಾಪಂ ಸದಸ್ಯ ಚಂದ್ರಮೌಳಿ, ತಾಲೂಕು ಗ್ಯಾರಂಟಿ ಯೋಜನೆ ಸದಸ್ಯ ಪ್ರಭುಶಂಕರ್, ಪ್ರಾಥಮಿಕ ಕೃಷಿಪತ್ತಿನ ಸಂಘದ ನಿರ್ದೇಶಕ ಮಲ್ಲಿಕಾರ್ಜುನ, ಶಿಕ್ಷಕರಾದ ಶಂಕರ್, ಯರಿಯೂರು ರೇಚಣ್ಣ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net