ಉಪನ್ಯಾಸಕನ ಆತ್ಮಹತ್ಯೆ ಪ್ರಕರಣ ಸಮಗ್ರ ತನಿಖೆಯಾಗಲಿ

ಅರಕಲಗೂಡಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಬಾಬುವರ್ಧನ್ ಅವರ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅನಂತರಾಜು, ಲಕ್ಷ್ಮಣ್, ಗಿರೀಶ್, ಜಯದೇವಪ್ಪ, ಹರಿಶ್ ಇತರರಿದ್ದರು.
ಅರಕಲಗೂಡಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಬಾಬುವರ್ಧನ್ ಅವರ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅನಂತರಾಜು, ಲಕ್ಷ್ಮಣ್, ಗಿರೀಶ್, ಜಯದೇವಪ್ಪ, ಹರಿಶ್ ಇತರರಿದ್ದರು.
Published on
ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಬಾಬುವರ್ಧನ್ ನಿಧನ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರಿಂದ ಮಂಗಳವಾರ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಸವಾಪಟ್ಟಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹರೀಶ್ ಮಾತನಾಡಿ, ಬಾಬುವರ್ಧನ್ ಅವರ ಅಕಾಲಿಕ ನಿಧನ ಉಪನ್ಯಾಸಕ ಸಮುದಾಯಕ್ಕೆ ತೀವ್ರ ನೋವುಂಟು ಮಾಡಿದೆ. ಅವರು ಪ್ರಾಮಾಣಿಕ, ಸಮಾಜಮುಖಿ ಚಿಂತನೆಯುಳ್ಳವರಾಗಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದ್ದರು ಎಂದು ಸ್ಮರಿಸಿದರು.
ಕಾಲೇಜಿನಲ್ಲಿ ನಡೆದಿರಬಹುದಾದ ಯಾವುದೇ ಕ್ಷುಲ್ಲಕ ಬೆಳವಣಿಗೆಗಳಿಂದಾಗಿ ಒಬ್ಬ ಪ್ರಾಮಾಣಿಕ ಉಪನ್ಯಾಸಕನ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಬಾಬುವರ್ಧನ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆದು ಅವರ ಸಾವಿಗೆ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ತನಿಖಾಧಿಕಾರಿಗಳ ಮೇಲಿದೆ ಎಂದು ಹೇಳಿದರು.
ಪ್ರಾಂಶುಪಾಲರಾದ ಅನಂತರಾಜು, ಲಕ್ಷ್ಮಣ್, ಗಿರೀಶ್, ಜಯದೇವಪ್ಪ, ಉಪನ್ಯಾಸಕರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net