ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ, ಮರಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ತಾಯಿ ಚಿರತೆಯ ಚಲನವಲನದ ಮೇಲೂ ನಿಗಾ ಇರಿಸಿದ್ದಾರೆ. ಸಾಮಾನ್ಯವಾಗಿ ಚಿರತೆಗಳು ಮರಿಗಳನ್ನು ಸುರಕ್ಷಿತ ಸ್ಥಳದಲ್ಲಿ ಬಿಟ್ಟು ಆಹಾರಕ್ಕಾಗಿ ತೆರಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮರಿಗಳ ಬಳಿ ಯಾರೂ ತೆರಳದಂತೆ ಅರಣ್ಯ ಇಲಾಖೆ ಗ್ರಾಮಸ್ಥರಿಗೆ ಸೂಚನೆ ನೀಡಿದ್ದು, ಮರಿಗಳು ಪತ್ತೆಯಾದ ಸ್ಥಳದಲ್ಲಿಯೇ ಅವುಗಳನ್ನು ಬಿಟ್ಟಿದ್ದರು.