ಆರೋಗ್ಯ ಸಂಪಾದನೆ ಜೀವನದ ಪ್ರಮುಖ ಧ್ಯೇಯವಾಗಲಿ

ಉಳ್ಳಾವಳ್ಳಿ  ಗ್ರಾಮದಲ್ಲಿ ಆಯುಷ್ಮಾನ್ ಸ್ವಾಸ್ಥೃ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. ಪುಟ್ಟರಾಜು, ಎಂ.ಆರ್.ವಾಸು, ರಘುರಾಂ, ಎಚ್.ಕೆ.ಯೋಗೇಶ್, ಎಚ್.ಎಸ್.ಮಹೇಶ್ ಇತರರು ಇದ್ದರು.
ಉಳ್ಳಾವಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಸ್ವಾಸ್ಥೃ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. ಪುಟ್ಟರಾಜು, ಎಂ.ಆರ್.ವಾಸು, ರಘುರಾಂ, ಎಚ್.ಕೆ.ಯೋಗೇಶ್, ಎಚ್.ಎಸ್.ಮಹೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಎನ್.ಬಾಲಕೃಷ್ಣ
  • ಉಳ್ಳಾವಳ್ಳಿ ಗ್ರಾಮ
ಹಿರೀಸಾವೆ: ಹಣ ಹಾಗೂ ಆಸ್ತಿ ಸಂಪಾದನೆ ಭರದಲ್ಲಿ ಮನುಷ್ಯ ತನ್ನ ಆರೋಗ್ಯವನ್ನು ಮರೆಯುತ್ತಿದ್ದಾನೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಹೋಬಳಿಯ ಉಳ್ಳಾವಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಸ್ವಾಸ್ಥ್ಯ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 65 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹಣಕ್ಕಿಂತ ಆರೋಗ್ಯ ಸಂಪಾದನೆ ಮುಖ್ಯ ಎಂಬುದನ್ನು ಮನಗಾಣಬೇಕಿದೆ ಎಂದರು.
ಆಧುನಿಕ ಜಗತ್ತು ಬೆಳೆದಂತೆಲ್ಲ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬದಲಾವಣೆ ಪರಿಣಾಮ ಸಾವಿರಾರು ಕಾಯಿಲೆಗಳು ಸೃಷ್ಟಿಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಕೃಷಿ ಚಟುವಟಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳು ಕಾಲಿಟ್ಟ ಬಳಿಕ ಮೂಲ ಕೃಷಿ ಪದ್ಧತಿಯೊಂದಿಗೆ ಹಗಲಿರುಳು ದುಡಿಯುವ ಕಾಲ ಕಣ್ಮರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇಗುಲಕ್ಕೆ 2 ಲಕ್ಷ ರೂ. ಹಾಗೂ ಈಗಾಗಲೇ ನಿರ್ಮಾಣಗೊಂಡಿರುವ ಗಣಪತಿ ಮಂದಿರಕ್ಕೆ 3 ಲಕ್ಷ ರೂ. ದೇಣಿಗೆ ನೀಡಲಾಗುವುದು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ಮಂಜೂರಾಗಿದ್ದು ನಿರ್ಮಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮೊದಲು ಗಣಪತಿ ಮಂದಿರದಲ್ಲಿ ಪ್ರತಿಷ್ಠಾಪಿಸಿರುವ ವಿನಾಯಕ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟರಾಜು, ಎಂ.ಆರ್.ವಾಸು, ಎಪಿಎಂಸಿ ಮಾಜಿ ಅಧ್ಯಕ್ಷ ಹುಗೇನಹಳ್ಳಿ ರಘುರಾಂ, ದಿಡಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಕೆ.ಯೋಗೇಶ್, ಉಪಾಧ್ಯಕ್ಷ ಎಚ್.ಎಸ್.ಮಹೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net