ಮಕ್ಕಳು ಬಾಲ್ಯದಲ್ಲೇ ಸಂಸ್ಕಾರ ಕಲಿಯಲಿ

ಕೊಳ್ಳೇಗಾಲ ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಪ್ರಸನ್ನ ರಾಮಮಂದಿರದಲ್ಲಿ ಭಾನುವಾರ ಕೊಳ್ಳೇಗಾಲ ತಾಲೂಕು ಬ್ರಾಹ್ಮಣ ಸಭಾ, ರಾಮ ಭಜನಾ ಸಭಾ, ವಾಗ್ದೇವಿ ವಿಪ್ರ ಮಹಿಳಾ ಸಂಘ ಆಚಾರ್ಯತ್ರಯ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು. ಡಾ.ಎನ್.ಶಶಿಶೇಖರ್ ದೀಕ್ಷಿತ್, ಆರ್.ಶೇಖರ್‌ಶಾಸಿ, ರಘುನಾಥ್, ಸುಮಾ ಶೇಷಾಚಲನ್, ಶ್ರೀಕಂಠಕುಮಾರ್, ಜಿ.ಎಂ ಹೆಗಡೆ ಇತರರು ಇದ್ದಾರೆ.
ಕೊಳ್ಳೇಗಾಲ ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಪ್ರಸನ್ನ ರಾಮಮಂದಿರದಲ್ಲಿ ಭಾನುವಾರ ಕೊಳ್ಳೇಗಾಲ ತಾಲೂಕು ಬ್ರಾಹ್ಮಣ ಸಭಾ, ರಾಮ ಭಜನಾ ಸಭಾ, ವಾಗ್ದೇವಿ ವಿಪ್ರ ಮಹಿಳಾ ಸಂಘ ಆಚಾರ್ಯತ್ರಯ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು. ಡಾ.ಎನ್.ಶಶಿಶೇಖರ್ ದೀಕ್ಷಿತ್, ಆರ್.ಶೇಖರ್‌ಶಾಸಿ, ರಘುನಾಥ್, ಸುಮಾ ಶೇಷಾಚಲನ್, ಶ್ರೀಕಂಠಕುಮಾರ್, ಜಿ.ಎಂ ಹೆಗಡೆ ಇತರರು ಇದ್ದಾರೆ.
Published on
ಕೊಳ್ಳೇಗಾಲ: ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿ ಕಲಿಸಬೇಕು ಎಂದು ಮೈಸೂರಿನ ಶ್ರೀ ಚಾಮುಂಡೇಶ್ವರಿ ಬೆಟ್ಟದ ಚಾಮುಂ ಡೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ಡಾ.ಎನ್.ಶಶಿಶೇಖರ್ ದೀಕ್ಷಿತ್ ಹೇಳಿದರು.

ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಪ್ರಸನ್ನ ರಾಮ ಮಂದಿರದಲ್ಲಿ ಭಾನುವಾರ ಕೊಳ್ಳೇಗಾಲ ತಾಲೂಕು ಬ್ರಾಹ್ಮಣ ಸಭಾ, ರಾಮ ಭಜನಾ ಸಭಾ, ವಾಗ್ದೇವಿ ವಿಪ್ರ ಮಹಿಳಾ ಸಂಘ ಆಚಾರ್ಯತ್ರಯ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ಶಾಸ್ತ್ರದ ಪ್ರಕಾರ ತಂದೆ-ತಾಯಿಗಳೆ ಮೊದಲ ಗುರುಗಳಾಗಿದ್ದಾರೆ. ಹಾಗಾಗಿ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಅತಿಯಾದ ಮೊಬೈಲ್ ಬಳಕೆಯಿಂದ ದೂರವಿಡಬೇಕು ಎಂದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಮಾತನಾಡಿ, ಆಚಾರ್ಯತ್ರಯರಾದ ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರ ಆಶಯಗಳನ್ನು ಸಮಾಜದ ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಬ್ರಾಹ್ಮಣರೆಲ್ಲರೂ ಸ್ಥಿತಿ ವಂತರು ಎಂಬ ಭಾವನೆ ಸಮಾಜದಲ್ಲಿದೆ. ಇದು ತಪ್ಪು ಗ್ರಹಿಕೆಯಾಗಿದೆ. ಬ್ರಾಹ್ಮಣರಲ್ಲೂ ಬಡವರಿದ್ದರೆ, ಮಕ್ಕಳ ಶಾಲಾ-ಕಾಲೇಜು ಶುಲ್ಕ ಭರಿಸುವುದಕ್ಕೂ ಕಷ್ಟಪಡುವ ಜನರು ಸಮಾಜದೊಳಗಿದ್ದಾರೆ ಎಂದರು.

ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರವನ್ನು ಸರ್ಕಾರ ನೀಡುತ್ತಿಲ್ಲ. ಬ್ರಾಹ್ಮಣರ ಮೇಲೆ ಟೀಕೆ-ಟಿಪ್ಪಣಿಗಳನ್ನು ಮಾಡಲಾಗುತ್ತದೆ. ಇದ್ಯಾವುದರ ವಿರುದ್ಧ ನಾವು ಹೋರಾಟಕ್ಕಿಳಿದಿಲ್ಲ. ನಮ್ಮ ಸಮಾಜವನ್ನು ಆರ್ಥಿಕವಾಗಿ ಸದೃಢ ಮಾಡಬೇಕೆಂದು ಬ್ರಾಹ್ಮಣ ಮಹಾಸಭಾ ಶ್ರಮಿಸುತ್ತಿದೆ. ಮುಂದಿನ ದಿನಗಳಲ್ಲಿ ಬ್ರಾಹ್ಮಣ ಸಮಾಜದ ಶಾಲೆಯನ್ನು ತೆರೆಯಲು ಚಿಂತಿಸಲಾಗಿದೆ. ಇದ್ದರಿಂದ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯವಾಗಲಿದೆ ಎಂದರು.

ಕೊಳ್ಳೇಗಾಲ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಆರ್.ಶೇಖರ್‌ಶಾಸ್ತ್ರೀ ಮಾತನಾಡಿ, ಕೊಳ್ಳೇಗಾಲದ ರಾಮಮಂದಿರದ ಇತಿಹಾಸ ತಿಳಿಸುವ ಜತೆಗೆ ಬ್ರಾಹ್ಮಣ ಮಹಾಸಭಾ ಸಂಘದ ಬೆಳೆದು ಬಂದ ಹಾದಿಯನ್ನು ಸವಿಸ್ತಾರವಾಗಿ ತಿಳಿಸಿದರು.

ಈ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ರಾಜಶೇಖರ್, ಕೊಳ್ಳೇಗಾಲ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಆರ್.ಶೇಖರ್‌ಶಾಸ್ತ್ರಿ, ನಿವೃತ್ತ ಪ್ರಾಧ್ಯಾಪಕಿ ಹಾಗೂ ಆಧ್ಯಾತ್ಮಿಕ ಚಿಂತಕಿ ಸುಮಾ ಶೇಷಾಚಲನ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಕಂಠಕುಮಾರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚಾಮರಾಜನಗರ ಜಿಲ್ಲಾಧ್ಯಕ್ಷ ಜಿ.ಎಂ ಹೆಗಡೆ, ಜಿಲ್ಲಾ ಖಜಾಂಚಿ ಎನ್.ಬಾಲಸುಬ್ರಹ್ಮಣ್ಯ, ಕಾರ್ಯಕಾರಿ ಸಮಿತಿ ಸದಸ್ಯ ಚಂದ್ರಚೂಡ, ವಾಗ್ದೇವಿ ವಿಪ್ರ ಮಹಿಳಾ ಸಂಘದ ಕೊಳ್ಳೇಗಾಲ ತಾಲೂಕು ಅಧ್ಯಕ್ಷೆ ಮಲ್ಲಿಕಾರಾವ್ ಹಾಗು ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕಿನ ಬ್ರಾಹ್ಮಣ ಮಹಾ ಸಭಾದ ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net