ಮಂಗಳವಾರ ಪಟ್ಟಣದ ಹೊರವಲಯದಲ್ಲಿರುವ ಜೆ.ಕೆ.ಮೆಮೋರಿಯಲ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿ, ಮಕ್ಕಳನ್ನು ಧರ್ಮ ಮತ್ತು ಸಂಸ್ಕಾರದ ಹಾದಿಯಲ್ಲಿ ನಡೆಸುವ ಜವಾಬ್ದಾರಿ ಪಾಲಕರು ಮತ್ತು ಶಾಲೆಗಳ ಮೇಲಿದೆ. ಆಟ&ಪಾಠಗಳಿಂದ ವಂಚಿತ ಮಕ್ಕಳ ಜೀವನ ಶೂನ್ಯವಾಗುತ್ತದೆ. ಇಂದಿನ ಮಕ್ಕಳು ಅತ್ಯಂತ ಬುದ್ಧಿವಂತರು, ಅವರನ್ನು ಕೇವಲ ಸ್ಪರ್ಧಾತ್ಮಕ ಜಗತ್ತಿಗೆ ತಯಾರಿಸುವುದಷ್ಟೇ ಅಲ್ಲ, ಸಂಸ್ಕಾರಯುತ ಶಿಕ್ಷಣ ನೀಡುವುದು ಅವಶ್ಯ ಎಂದು ಸಲಹೆ ನೀಡಿದರು.