ಮಕ್ಕಳು ಮಾದಕ ವಸ್ತುಗಳಿಂದ ದೂರವಿರಲಿ Sankalpa

Sankalpa ಹುಳಿಯಾರು ಹೋಬಳಿಯ ಚಿಕ್ಕಬಿದರೆಯ ಮಾರುತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾಸ  ಸಂಕಲ್ಪ ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರಾದ ತಿಪ್ಪೇಸ್ವಾಮಿ, ಲಿಖಿತಾ, ಪೂಜಾ, ವಲಯ ಮೇಲ್ವಿಚಾರಕಿ ಉಮಾದೇವಿ, ಸೇವಾಪ್ರತಿನಿಧಿ ರತ್ನಮ್ಮ ಇದ್ದರು.
Sankalpa ಹುಳಿಯಾರು ಹೋಬಳಿಯ ಚಿಕ್ಕಬಿದರೆಯ ಮಾರುತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾಸ ಸಂಕಲ್ಪ ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರಾದ ತಿಪ್ಪೇಸ್ವಾಮಿ, ಲಿಖಿತಾ, ಪೂಜಾ, ವಲಯ ಮೇಲ್ವಿಚಾರಕಿ ಉಮಾದೇವಿ, ಸೇವಾಪ್ರತಿನಿಧಿ ರತ್ನಮ್ಮ ಇದ್ದರು.
Published on

ಹುಳಿಯಾರು:

ಹೋಬಳಿಯ ಚಿಕ್ಕಬಿದರೆಯ ಮಾರುತಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇತ್ತೀಚೆಗೆ ಸ್ವಾಸ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಆರೋಗ್ಯ ಇಲಾಖೆಯ ಸಿಎಚ್​ಒ ಮಾಲತೇಶ್​ ಮಾತನಾಡಿ, ಇಂದಿನ ಯುವ ಪೀಳಿಗೆ ಹಾಗೂ ಸಮಾಜವನ್ನು ಮಾರಕವಾಗಿ ಕಾಡುತ್ತಿರುವ ಮಾದಕ ವಸ್ತುಗಳ ಬಳಕೆ ಅತ್ಯಂತ ಕಳವಳಕಾರಿ ವಿಷಯ.
ಸಿಗರೇಟ್​, ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹಾಳಾಗುವುದಷ್ಟೇ ಅಲ್ಲದೆ, ಪ್ರಕಾಶಮಾನವಾದ ಭವಿಷ್ಯವೂ ನಾಶವಾಗುತ್ತದೆ. ವಿದ್ಯಾರ್ಥಿಗಳು ಇಂತಹ ದುರಭ್ಯಾಸಗಳಿಂದ ಸಂಪೂರ್ಣವಾಗಿ ದೂರವಿದ್ದು, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್​ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪುಸ್ತಕದ ವಿದ್ಯೆಗೆ ಸೀಮಿತವಾಗದೆ, ವೈಯಕ್ತಿಕ ಜೀವನದಲ್ಲಿ ಉತ್ತಮ ಸಂಸತಿ ಮತ್ತು ಸಂಸ್ಕಾರ ಅಳವಡಿಸಿಕೊಳ್ಳುವುದು ಅತ್ಯಗತ್ಯ. ಗುರು-ಹಿರಿಯರಿಗೆ ಗೌರವ ನೀಡುವುದು ಮತ್ತು ಸನ್ಮಾರ್ಗದಲ್ಲಿ ನಡೆಯುವುದು ಯಶಸ್ವಿ ಜೀವನಕ್ಕೆ ಬುನಾದಿ ಎಂದು ಹೇಳಿದರು. Sankalpa
ಮಾದಕ ಮುಕ್ತ ಸಮಾಜ ನಿಮಾರ್ಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net