ಸೇಡಂ: ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ಪ್ರತಿಯೊಬ್ಬರೂ ಆರೋಗ್ಯದತ್ತ ಹೆಚ್ಚಿನ ಗಮನ ನೀಡುವುದು ಅವಶ್ಯ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಸಂಜೀವಕುಮಾರ ಪಾಟೀಲ್ ಹೇಳಿದರು. ಕೋಡ್ಲಾ ಕ್ರಾಸ್ನಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯಿಂದ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶದ ಜನರಿಗೆ ಗುಣಮಟ್ಟದ ವೈದ್ಯಕಿಯ ಸೇವೆ ತಲುಪಿಸುವ ಉದ್ದೇಶದಿಂದ ಇಂತಹ ಉಚಿತ ಶಿಬಿರ ಆಯೋಜಿಸುತ್ತಿರುವುದು ಶ್ಲಾನೀಯ ಎಂದು ತಿಳಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೆಂಕಟೇಶ ಕುಲಕರ್ಣಿ, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ನ ವೈದ್ಯಾಧಿಕಾರಿ ಡಾ.ರಮಣಾಚಾರಿ, ಮಾನವ ಸಂಪನ್ಮೂಲ ವಿಭಾಗದ ಗಣೇಶ ಕಡಬಗಾಂವ್, ನಾಗಕುಮಾರ ಎಳ್ಳಿ ಇತರರಿದ್ದರು.