ಭೇದ ತೊರೆದು ಒಂದಾಗಿ ಬದುಕಿ

ಆಲದಕಟ್ಟಿ ಕೆ.ಎಂ. ಗ್ರಾಮದಲ್ಲಿ ಶಿವಯೋಗೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರಥೋತ್ಸವ ಅದ್ದೂರಿಯಾಗಿ ಜರುಗಿತು.
ಆಲದಕಟ್ಟಿ ಕೆ.ಎಂ. ಗ್ರಾಮದಲ್ಲಿ ಶಿವಯೋಗೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರಥೋತ್ಸವ ಅದ್ದೂರಿಯಾಗಿ ಜರುಗಿತು.
Published on
ತಲ್ಲೂರ: ಭಾರತೀಯ ಸಂಸತಿಯಲ್ಲಿ ಜಾತ್ರೆ, ಹಬ್ಬಗಳಿಗೆ ವಿಶಿಷ್ಟ ಸ್ಥಾನವಿದೆ. ಅವುಗಳನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹುಬ್ಬಳ್ಳಿ ಮೂರುಸಾವಿರ ಮಠದ ಮಹಾರಾಜ ನಿರಂಜನ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಆಲದಕಟ್ಟಿ ಕೆ.ಎಂ ಗ್ರಾಮದಲ್ಲಿ ಶಿವಯೋಗೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ನೂತನ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ದಾನ, ಧರ್ಮ ಹಾಗೂ ಪರೋಪಕಾರ ಪುಣ್ಯದ ಕೆಲಸ. ಜಾತಿ ಭೇದ&ಭಾವ ಮಾಡದೇ ಒಂದಾಗಿ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು. ಇದಕ್ಕೂ ಮುನ್ನ ಶೀವಯೋಗಿಶ್ವರ ಗದ್ದುಗೆ ಪೂಜೆ, ರುದ್ರಾಭಿಷೇಕ, ವಿಶೇಷ ಪೂಜೆ ಅಲಂಕಾರ ನೆರವೇರಿದವು. ಭಕ್ತರು ತೇರಿಗೆ ಉತ್ತತ್ತಿ ಎಸೆದು ಭಕ್ತಿ ಅರ್ಪಿಸಿದರು.
ಮುರಗೋಡ ಮಹಾಂತ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ, ಮುನವಳ್ಳಿ ಸೋಮಶೇಖರ ಮಠದ ಮುರುಂದ್ರ ಸ್ವಾಮೀಜಿ, ಹಿರೇಮಠದ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ, ಮೂರುಸಾವಿರ ಮಠದ ್ರಭು ನೀಲಕಂಠ ಸ್ವಾಮೀಜಿ, ಬಸಲಿಂಗಯ್ಯ ಹಿರೇಮಠ, ಚಂದ್ರಯ್ಯ ಹಿರೇಮಠ, ಈರಯ್ಯ ಶಾಸ್ತ್ರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net