ಬೆಂಗಳೂರಿನಂತೆ ಹನೂರು ಕ್ಷೇತ್ರವೂ ಅಭಿವೃದ್ಧಿ ಹೊಂದಲಿ

ಹನೂರಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ರಮೇಶ್, ನಾಗೇಂದ್ರ, ರಾಜುಗೌಡ, ಮಂಜೇಶ್ ಇತರರಿದ್ದರು.
ಹನೂರಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ರಮೇಶ್, ನಾಗೇಂದ್ರ, ರಾಜುಗೌಡ, ಮಂಜೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ಆರ್.ಮಂಜುನಾಥ್
  • ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣ
ಹನೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಫಲವಾಗಿ ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಹಾಗೆಯೇ ಹನೂರು ಕ್ಷೇತ್ರವೂ ಅಭಿವೃದ್ಧಿಯಾಗಬೇಕಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಆಶಯ ವ್ಯಕ್ತಪಡಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಬೆಂಗಳೂರು ಐಟಿ ಬಿಟಿಗೆ ಹೆಸರುವಾಗಿದ್ದು, ವೇಗವಾಗಿ ಬೆಳೆಯುತ್ತಿದೆ. ಇತರ ದೇಶದ ಜನರಿಂದ ಪ್ರಸಿದ್ಧಿಯನ್ನೂ ಪಡೆದಿದೆ. ಇದಕ್ಕೆ ನಿರ್ಮಾತೃ ಕೆಂಪೇಗೌಡರೇ ಕಾರಣ. ಇವರ ದೂರದೃಷ್ಟಿಯ ಫಲ ಬೆಂಗಳೂರು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರು.
ವಿವಿಧೆಡೆಯಿಂದ ಬರುವ ಜನರಿಗೆ ಬೆಂಗಳೂರು ಜೀವನ ರೂಪಿಸಿಕೊಟ್ಟಿದೆ. ಹನೂರು ಭಾಗದ ಜನರೂ ಸಹ ಉದ್ಯೋಗ ಹರಸಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಗಾಗಿ ಕೆಂಪೇಗೌಡ ಆದರ್ಶ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದಾರೆ. ಇವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.
ಹನೂರು ಭಾಗದಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ ಹಾಗೂ ಇತರ ಅಗತ್ಯ ಮೂಲ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾರ್ಯಗಳು ಆಗಬೇಕಿರುವುದಕ್ಕೆ ಕೆಂಪೇಗೌಡರು ಪ್ರೇರಣೆಯಾಗಿದ್ದಾರೆ. ಈಗಾಗಲೇ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಲಾಗಿದೆ. ಪಟ್ಟಣದಲ್ಲಿ ಜು.9 ರಂದು ಸಮುದಾಯ ವತಿಯಿಂದ ಆಚರಿಸಲು ನಿರ್ಧರಿಸಿರುವ ವಿಜೃಂಭಣೆಯ ಜಯಂತಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದ ಅವರು, ಪಟ್ಟಣದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದಾಗ ಇದಕ್ಕೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಗ್ರೇಡ್ 2 ತಹಸೀಲ್ದಾರ್ ರಮೇಶ್, ಉಪ ತಹಸೀಲ್ದಾರ್ ಸುರೇಖಾ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಪಪಂ ಮುಖ್ಯಾಧಿಕಾರಿ ರೇಖಾ, ಸೆಸ್ಕ್ ಎಇಇ ರಂಗಸ್ವಾಮಿ, ಆರ್‌ಐಗಳಾದ ಮಹದೇವಸ್ವಾಮಿ, ಶಿವಕುಮಾರ್, ನಿರಂಜನ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ, ಮುಖಂಡರಾದ ರಾಜುಗೌಡ, ಮಂಜೇಶ್, ಆನಂದಕುಮಾರ್, ಲಿಂಗರಾಜು, ನಟರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net