ಪರಮೇಶ್ವರ ಮುಖ್ಯಮಂತ್ರಿಯಾಗಲಿ

Let Parameshwara be the Chief Minister.
Let Parameshwara be the Chief Minister.
Published on
ಕೊರಟಗೆರೆ: ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿಯಾಗಲಿ ಎಂದು ತಾಲೂಕಿನ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಬ್ಲಾಕ್​ ಕಾಂಗ್ರೆಸ್​ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ವಿಶೇಷವಾಗಿ ಪೂಜೆ ಸಲ್ಲಿಸಿದರು.
ನಗರ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ ಮಾತನಾಡಿ, ಡಾ.ಜಿ.ಪರಮೇಶ್ವರ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2013 ಮತ್ತು 2018ರಲ್ಲಿ ಕಾಂಗ್ರೆಸ್​ ಸರ್ಕಾರ ರಚನೆಗೆ ಮಹತ್ವದ ಪಾತ್ರ ವಹಿಸಿದ್ದಾರೆ. ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕೆಂಬ ಜನಮನದ ಕೂಗು ಹೆಚ್ಚಿದ್ದು, ಸಿಎಂ ಬದಲಾವಣೆಯಾದಲ್ಲಿ ಡಾ.ಜಿ.ಪರಮೇಶ್ವರ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮಾಂತರ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಅರಕರೆ ಶಂಕರ್​ ಮಾತನಾಡಿ, ಡಾ.ಜಿ.ಪರಮೇಶ್ವರ ಕಳಂಕ ರಹಿತ ಸ್ವಚ್ಛ ರಾಜಕಾರಣಿ, ಎಲ್ಲ ವರ್ಗಗಳ ನಾಯಕರಾಗಿದ್ದು, ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿದ್ದಾರೆ. 40 ವರ್ಷಗಳ ರಾಜಕೀಯ ಅನುಭವವನ್ನು ಪಕ್ಷದ ವರಿಷ್ಠರು ಗುರುತಿಸಿ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದರು.
ತಾಪಂ ಮಾಜಿ ಅಧ್ಯಕ್ಷ ಟಿ.ಸಿ.ರಾಮಯ್ಯ, ತಾಲೂಕು ಯೂತ್​ ಮಾಜಿ ಅಧ್ಯಕ್ಷವಿನಯ್​ ಕುಮಾರ್​, ಮುಖಂಡರಾದ ಜಯರಾಮ್​, ಎಲ್​.ರಾಜಣ್ಣ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net