ಪ್ರಜಾಸೇವೆಗೆ ಇರಲಿ ಜನರ ಸಹಕಾರ

ಶಹಾಪುರ ತಾಲೂಕಿನ ಗೋಗಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಶರಣಬಸಪ್ಪ ದರ್ಶನಾಪುರ ಮಾತನಾಡಿದರು. ತಹಸೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ಗುತ್ತೇದಾರ್, ಸಹಾಯಕ ಖಜಾನೆ ಅಧಿಕಾರಿ ಡಾ.ಮೋನಪ್ಪ ಶಿರವಾಳ ಇತರರಿದ್ದರು.
ಶಹಾಪುರ ತಾಲೂಕಿನ ಗೋಗಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಶರಣಬಸಪ್ಪ ದರ್ಶನಾಪುರ ಮಾತನಾಡಿದರು. ತಹಸೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ಗುತ್ತೇದಾರ್, ಸಹಾಯಕ ಖಜಾನೆ ಅಧಿಕಾರಿ ಡಾ.ಮೋನಪ್ಪ ಶಿರವಾಳ ಇತರರಿದ್ದರು.
Published on
ಶಹಾಪುರ: ಜನರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆದಾಡಬಾರದು ಎಂಬ ಏಕೈಕ ಉದ್ದೇಶದಿಂದ ಸರ್ಕಾರವೇ ಜನರ ಬಳಿಗೆ ಬಂದು ಅವರ ಸಮಸ್ಯೆಗಳನ್ನು ಪ್ರಜಾಸೇವೆ ಮೂಲಕ ಆಲಿಸಿ ಪರಿಹಾರ ಕಲ್ಪಿಸಲಾಗುತ್ತಿದೆ. ಹೀಗಾಗಿ ಈ ಪ್ರಜಾಸೇವೆಗೆ ಜನರ ಸಹಕಾರ ಬಹಳ ಅಗತ್ಯ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.
ತಾಲೂಕಿನ ಗೋಗಿ ಹೋಬಳಿಯ ಗೋಗಿ ಗ್ರಾಮದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಪ್ರಜಾಸೇವೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವುದೇ ಪ್ರಜಾಸೇವೆಯ ಪ್ರಮುಖ ಉದ್ದೇಶ ಎಂದು ಹೇಳಿದರು.
ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಪ್ರಜಾಸೇವೆ ಎಂಬ ಹೊಸದಾಗಿ ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಲು ಸರಕಾರ ಸಜ್ಜಾಗಿದೆ ಎಂದು ಅವರು ಹೇಳಿದರು.ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು, ಸೌಲಭ್ಯಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ಸೇವೆಗಳ ಕುರಿತು ಅಽಕಾರಿಗಳು ಮಾಹಿತಿ ನೀಡಿದರು.
ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಽಕಾರಿಗಳು ಕ್ರಮ ಕೈಗೊಂಡರು.ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಯೋಜನೆಗಳು ತ್ವರಿತವಾಗಿ ತಲುಪಬೇಕು, ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದನೆ ದೊರೆಯಬೇಕು ಹಾಗೂ ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಬೇಕು ಎಂಬ ಉದ್ದೇಶದಿಂದ ಅಭಿಯಾನ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ವೇಳೆ ತಹಸೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ, ತಾಲೂಕು ಆರೋಗ್ಯ ಅಧಿಕಾರಿ ಡಾ. ರಮೇಶ ಗುತ್ತೇದಾರ್, ಸಹಾಯಕ ಖಜÁನೆ ಅಧಿಕಾರಿ ಡಾ. ಮೋನಪ್ಪ ಶಿರವಾಳ, ಪಶು ಸಂಗೋಪ ನೀಲಕೀಯ ಸಹಾಯಕ ನಿರ್ದೇಶಕ ಡಾ ಅಣ್ಣಾರಾವ್ ಪಾಟೀಲ್, ಸಿಪಿಐ ದೀಪಕï ಬೂಸï ರೆಡ್ಡಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುನಿಲ್ ಕುಮಾರ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಶಿಕಾಂತ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ ಪಾರಶೆಟ್ಟಿ, ಸಿಡಿಪಿಒ ಅಶೋಕ ಜಿಟಿ, ತಾಲೂಕು ಬಿಸಿಎಂ ಅಧಿಕಾರಿ ಚನ್ನಪ್ಪ ಗೌಡ ಚೌಧರಿ ಇತರರಿದ್ದರು.

ಶಾಸಕರಿಂದ ಅಹವಾಲು ಸ್ವೀಕಾರ

ಶಾಸಕ ಶರಣಬಸಪ್ಪ ದರ್ಶನಪುರ ಮತ್ತು ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಽಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ, ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿದರು. ಒಟ್ಟು ೧೫೧ ಅರ್ಜಿ ಆನ್‌ಲೈನ್ ಮೂಲಕ ಸಲ್ಲಿಕೆಯಾಗಿದೆ. ಸ್ಥಳದಲ್ಲಿ ಯಾವುದೇ ಅರ್ಜಿ ಇತ್ಯರ್ಥವಾಗಿಲ್ಲ. ಸಂಬAಽಸಿದ ಇಲಾಖೆಗಳಿಗೆ ಅರ್ಜಿ ವಿಲೇವಾರಿ ಮಾಡಲಾಗಿದೆ. ಒಂದು ವಾರದ ಒಳಗಡೆ ಅರ್ಜಿಗಳನ್ನು ಪರಿಶೀಲಿಸಿ ಇತ್ಯಾರ್ತಗೊಳಿಸಲಾಗುವುದು ಎಂದು ತಹಸಿಲï ಕಚೇರಿ ಅಧಿಕಾರಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net