ಬಂಗಾರಪೇಟೆ: ವಿದ್ಯಾರ್ಥಿಗಳು ಪಠ್ಯಾಧಾರಿತ ಬೆಳವಣಿಗೆಯ ಜತೆಗೆ ಜೀವನ ಮೌಲ್ಯಗಳು ಹಾಗೂ ಕೌಶಲಗಳ ಕಡೆಗೆ ಗಮನಹರಿಸುವಂತೆ ಪೊಲೀಸ್ ಉಪ ಮಹಾನಿರೀಕ್ಷಕ ಡಿ.ದೇವರಾಜ್ ತಿಳಿಸಿದರು. students
ನಗರದ ಖಾಸಗಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಂಗಾರಪೇಟೆ ಕನ್ನಡ ಸಂದ ಅಧ್ಯಕ್ಷ ಪಲ್ಲವಿಮಣಿ ವಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ಚಾರಿತ್ರ್ಯವನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ಎಸ್‌ಡಿಸಿ ಪದವಿಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 495 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.