ವಿದ್ಯಾರ್ಥಿಗಳು ಕೌಶಲ ವೃದ್ಧಿಸಿಕೊಳ್ಳಲಿ

ಮುಧೋಳದ ಶೀ ಎಸ್.ಆರ್. ಕಂಠಿ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಬಾಗಲಕೋಟೆ ವಿವಿ ಮೌಲ್ಯಮಾಪನ ಕುಲಸಚಿವೆ ಡಾ. ಲತಾ ಕೆ.ಪಿ. ಉದ್ಘಾಟಿಸಿದರು. ಉಷಾ ಬೆಳಗಲಿ, ಪ್ರೀತಿ ದೊಡಮನಿ ಡಾ. ಲೋಕೇಶ ರಾಠೋಡ, ಡಾ. ಪ್ರಹ್ಲಾದ ಕೆ., ಪ್ರೊ. ರಾಧಾ ಮಾಲಿಪಾಟೀಲ, ಪ್ರೊ. ಅನೀಲಕುಮಾರ ಮುನ್ನೊಳ್ಳಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕುಲಸಚಿವೆ ಡಾ. ಲತಾ ಕೆ.ಪಿ. ಹೇಳಿಕೆ
  • ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಮುಧೋಳ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಹನೆ, ಪರಿಶ್ರಮ, ನಂಬಿಕೆ ಹಾಗೂ ಆತ್ಮವಿಶ್ವಾಸ ಮೈಗೂಡಿಸಿಕೊಂಡು ನಿರಂತರ ಕಷ್ಟಪಟ್ಟು ಅಧ್ಯಯನ ಮಾಡಿದರೆ ಮಾತ್ರ ಕಂಡ ಕನಸು ಮಾಡಿಕೊಳ್ಳಲು ಸಾಧ್ಯ ಎಂದು ಬಾಗಲಕೋಟೆ ವಿವಿ ಮೌಲ್ಯಮಾಪನ ಕುಲಸಚಿವೆ ಡಾ. ಲತಾ ಕೆ.ಪಿ ಹೇಳಿದರು.

ನಗರದ ಬಿವಿವಿ ಸಂಘದ ಶ್ರೀ ಎಸ್.ಆರ್. ಕಂಠಿ ಮಹಾವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡು, ಸೋಲಿಗೆ ಕುಗ್ಗದೆ ಪ್ರಾಮಾಣಿಕವಾಗಿ ಶ್ರಮಿಸಲು, ಕೌಶಲಗಳನ್ನು ವೃದ್ಧಿಸಿಕೊಳ್ಳಲು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಲಹೆ ನೀಡಿದರು.
ಪ್ರಾಚಾರ್ಯ ಡಾ. ಎಂ.ಆರ್. ಜರಕುಂಟಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದಾರೆ ಎಂದು ಪ್ರಶಂಸಿಸಿದರು.
ಪ್ರೊ. ಅಜ್ಜಪ್ಪ ಕಡೂರ ಉಷಾ ಬೆಳಗಲಿ, ಪ್ರೀತಿ ದೊಡಮನಿ ಡಾ. ಲೋಕೇಶ ರಾಠೋಡ, ಡಾ. ಪ್ರಲ್ಹಾದ ಕೆ. ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net