ಸ್ವಸ್ಥ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಲಿ

ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಪನ್ಮೂಲ ವ್ಯಕ್ತಿ ಗೋವಿಂದ ಮಂಡ್ಯ
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಹನಗೋಡು:

ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ಅಡ್ಡದಾರಿ ಹಿಡಿಯುತ್ತಿದ್ದು, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸ್ವಸ್ಥ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ ಗೋವಿಂದ ಮಂಡ್ಯ ಸಲಹೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಇಲ್ಲಿನ ಲಕ್ಷ್ಮಣತೀರ್ಥ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಹಾಗೂ ತಂಬಾಕು ವಿರೋಧಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ಷಣಿಕ ಸುಖದ ಭ್ರಮೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆ ಮಾದಕ ವಸ್ತುಗಳಿಗೆ ದಾಸರಾಗಿ, ಅರಿವಿಲ್ಲದಂತೆ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರಂತದ ಸಂಗತಿ. ಮಾದಕ ವಸ್ತುಗಳ ಸೇವನೆಯಿಂದ ದೇಹದ ಪ್ರತಿಯೊಂದು ಜೀವಕೋಶದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ. ತಂಬಾಕು ಸೇವನೆಯಿಂದ ವಿಶ್ವದಾದ್ಯಂತ ಪ್ರತಿವರ್ಷ ಲಕ್ಷಾಂತರ ಜನರು ಮೃತಪಟ್ಟಿದ್ದು, ಭಾರತದಲ್ಲಿಯೂ ಮಾದಕ ವ್ಯಸನದ ಪ್ರಮಾಣ ಆತಂಕಕಾರಿಯಾಗಿದೆ. ಇದರಿಂದ ಕುಟುಂಬದ ಆರೋಗ್ಯ ಹಾಗೂ ಆರ್ಥಿಕ ಸ್ಥಿತಿಯ ಮೇಲೂ ದುಷ್ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ಸದಸ್ಯ ದಾ.ರಾ.ಮಹೇಶ್ ಮಾತನಾಡಿ, ಪ್ರಜ್ಞಾವಂತ ಯುವಕರು ದುಶ್ಚಟಗಳಿಗೆ ದಾಸರಾಗದೆ ಎಚ್ಚರಿಕೆಯಿಂದಿ ರಬೇಕು. ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪ್ರತಿಯೊಬ್ಬರೂ ಅರಿವು ಹೋಮದಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ನಟರಾಜ್, ಯೋಜನೆ ಮೇಲ್ವಿಚಾರಕಿ ಪುಷ್ಪಲತಾ, ಸೇವಾ ಪ್ರತಿನಿಧಿ ಮೇನಕಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net