ಬಿಜೆಪಿಯವರು ಕೇಂದ್ರದ ವಿರುದ್ಧ ಪ್ರತಿಭಟಿಸಲಿ

Let the BJP protest against the Centre.
Let the BJP protest against the Centre.
Published on
ಡಿಸಿಎಂ ಡಿ.ಕೆ.ಶಿವಕುಮಾರ ವಾಗ್ದಾಳಿ
ಬೆಳಗಾವಿ: ಕೃಷಿ ಬೆಳೆಗಳಿಗೆ ನ್ಯಾಯಯುತ ಬೆಲೆ ನಿಗದಿಪಡಿಸಲು ಕೇಂದ್ರ ಸರ್ಕಾರದ ಮೇಲೆ ರಾಜ್ಯ ಬಿಜೆಪಿ ಶಾಸಕರು, ಸಂಸದರು ಒತ್ತಡ ಹಾಕಲಿ. ಇಲ್ಲವೇ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಾಗ್ದಾಳಿ ನಡೆಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ವರ್ಷಗಳಿಂದ ಕೇಂದ್ರ ಸರ್ಕಾರ ಸಕ್ಕರೆ ಬೆಲೆ ಹೆಚ್ಚಳ ಮಾಡಿಲ್ಲ. ನಿಮಗೆ ನಷ್ಟವಾದರೂ ರೈತರು ಬದುಕಬೇಕು ಎಂದು ನಾವು ಒತ್ತಾಯ ಮಾಡುತ್ತಿದ್ದೇವೆ. ಈ ಹೋರಾಟ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ. ಬಿಜೆಪಿಯವರಿಗೆ ಮಾತನಾಡಲು ಬೇರೆ ವಿಚಾರ ಇಲ್ಲ. ಹೀಗಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಬ್ಬು, ಮೆಕ್ಕೆಜೋಳ ವಿಚಾರದಲ್ಲಿ ರೈತರ ಪರವಾಗಿ ತೆಗೆದುಕೊಂಡಿರುವ ದಿಟ್ಟ ತೀರ್ಮಾನವನ್ನು ಬಿಜೆಪಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಎಂದಾದರೂ ತೆಗೆದುಕೊಂಡಿದ್ದಾರಾ?. ಮೆಕ್ಕೆಜೋಳ ಖರೀದಿಗೆ ತೀರ್ಮಾನ ಮಾಡಿದ್ದೇವೆ. ಕಬ್ಬಿನ ವಿಚಾರದಲ್ಲಿ ರೈತರ ಪರವಾಗಿ ನಿಂತಿದ್ದೇವೆ. ಸಕ್ಕರೆ ಕಾರ್ಖಾನೆಯವರು ನಮಗೆ ನಷ್ಟವಾಗುತ್ತದೆ, ಕಾರ್ಖಾನೆ ಬಂದ್​ ಮಾಡಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ. ಈ ಬೆಳೆಗಳಿಗೆ ದರ ನಿಗದಿ ಮಾಡುವವರು ಕೇಂದ್ರ ಸರ್ಕಾರದವರು. ಆದರೆ, ಇಲ್ಲಿಯವರೆಗೆ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.
ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಆಡಳಿತ ಪ, ವಿರೋಧ ಪ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ವಿಶ್ವಾಸವಿದೆ. ರೈತರ ಸಮಸ್ಯೆ ವಿಚಾರದಲ್ಲಿ ಕೇಂದ್ರ ಯಾಕೆ ಭಾಗಿಯಾಗುತ್ತಿಲ್ಲ. ಪ್ರೋತ್ಸಾಹಿಸುತ್ತಿಲ್ಲ. ಬೆಂಬಲ ಬೆಲೆ ಹಣ ಯಾಕೆ ಬಿಡುಗಡೆ ಮಾಡುತ್ತಿಲ್ಲ? ಬೆಳೆಗಳನ್ನು ಕೇಂದ್ರ ಸರ್ಕಾರ ಯಾಕೆ ಖರೀದಿ ಮಾಡುತ್ತಿಲ್ಲ. ಸಕ್ಕರೆ ಬೆಲೆ ಸೇರಿ ಅನೇಕ ವಿಚಾರವಾಗಿ ಚರ್ಚೆ ಮಾಡಬೇಕು. ಈ ಎಲ್ಲ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net