ಸ್ಪರ್ಧಾತ್ಮಕ ಪರೀೆಗಳ ವ್ಯವಸ್ಥೆ ಸುಧಾರಿಸಲಿ system be improved.

ದೆಹಲಿ ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಗುಡಿಬಂಡೆ ತಾಲೂಕು ಕಚೇರಿ ಮುಂಭಾಗದ ಮುಖ್ಯರಸ್ತೆಯಲ್ಲಿ ಪ್ರತಿಭಟಿಸಿದರು.
ದೆಹಲಿ ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಗುಡಿಬಂಡೆ ತಾಲೂಕು ಕಚೇರಿ ಮುಂಭಾಗದ ಮುಖ್ಯರಸ್ತೆಯಲ್ಲಿ ಪ್ರತಿಭಟಿಸಿದರು.
Published on
ಗುಡಿಬಂಡೆ :ದೆಹಲಿ ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಮಂತ್ರಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಗುರುವಾರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಡಿವೈಎಫ್​ಐ ಸಂಟನೆಯ ಬೆಂಬಲದಿಂದ ತಾಲೂಕು ಕಚೇರಿಯ ಮುಖ್ಯರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
ಡಿವೈಎ್​ಐ ಜಿಲ್ಲಾ ಯುವ ಮುಖಂಡ ರಾಜಶೇಖರ್​ ಮಾತನಾಡಿ, ನೀಟ್​ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಬಡ ವಿದ್ಯಾರ್ಥಿಗಳ ಜೀವನದ ಜತೆ ಕೇಂದ್ರ ಸರ್ಕಾರ ಚೆಲ್ಲಾಟ ಆಡುತ್ತಿದ್ದು, ಈ ಬಗ್ಗೆ ಪರೀಾ ಅವ್ಯವಸ್ಥೆಗಳನ್ನು ವಿರೋಧಿಸಿ ದೆಹಲಿಯ ಜಂತರ್​ ಮಂತರ್​ನಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದರೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಗುಂಡಾಗಳಂತೆ ವರ್ತಿಸಿ ಲಾಠಿ ಚಾರ್ಜ್​ ಮಾಡುತ್ತಿದ್ದಾರೆ ಇದು ಖಂಡನೀಯ. ಕೂಡಲೇ ಪರೀಾ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಒತ್ತಾಯಿಸಿದರು.
ನಂತರ ಡಿವೈಎ್​ಐ ಜಿಲ್ಲಾ ಸದಸ್ಯ ರಮಣ ಮಾತನಾಡಿ, ನೀಟ್​ ಪ್ರಶ್ನೆಪತ್ರಿಕೆ ಸೋರಿಕೆ, ಪರೀೆಯಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಪರೀಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ವಿಶ್ವಾಸ ಕುಸಿಯುತ್ತಿರುವ ಪರಿಸ್ಥಿತಿ ಎದುರಾಗಿದೆ. ಲಾಂತರ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀೆಗಳಿಗಾಗಿ ಹಲವು ವರ್ಷಗಳ ಕಾಲ ಶ್ರಮಿಸುತ್ತಾರೆ. ಅವರ ಕುಟುಂಬಗಳು ಅಪಾರ ಆರ್ಥಿಕ ಹಾಗೂ ವೈಯಕ್ತಿಕ ತ್ಯಾಗಗಳನ್ನು ಮಾಡಿದ್ದಾರೆsystem be improved.
, ಇಂತಹ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಪರೀಾ ಅಕ್ರಮಗಳು, ಆಡಳಿತಾತ್ಮಕ ರ್ನಿಲಕ್ಷ$್ಯ ಅಥವಾ ಪಾರದರ್ಶಕತೆಯ ಕೊರತೆ ಉಂಟಾದರೆ ಅದು ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಅದಲ್ಲದೆ ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೂ ಕುಂದಿಸುತ್ತದೆ ಎಂದರು.
ಜಿಲ್ಲಾಧ್ಯಕ್ಷ ವೈ.ಹರೀಶ್​, ಜಿಲ್ಲಾ ಸದಸ್ಯರಾದ ಸೋಮಶೇಖರೆಡ್ಡಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net