ಸರ್ಕಾರ ಕೊಟ್ಟ ಭರವಸೆ ಈಡೇರಿಸಲಿ

Let the government fulfill its promise.
Let the government fulfill its promise.
Published on
ಎಂ.ಎನ್​.ಕೋಟೆ: ಕಾಡುಗೊಲ್ಲ ಜನಾಂಗದವರನ್ನು ಎಸ್​ಟಿ ಮೀಸಲಾತಿಗೆ ಸೇರಿಸಬೇಕೆಂದು ಮೂರು ದಶಕಗಳ ಕಾಲ ಹೋರಾಟ ಮಾಡಿದ್ದೇವೆ. ಆದರೆ ಇದುವರೆಗೂ ನಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ ಎಂದು ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯ ಬೀಳೆಕಲ್ಲನಹಟ್ಟಿಯಲ್ಲಿ ಗುರುವಾರ ವನಕಲ್ಲು ಮಠದ ಜಾತ್ರಾ ಮಹೋತ್ಸವ ಪ್ರಯುಕ್ತ ಬೀಕ್ಷಾಟಣೆ ಮಾಡಿ ಮಾತನಾಡಿದ ಅವರು, ಕಾಡುಗೊಲ್ಲ ಜನಾಂಗಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಮ್ಮ ಸಮುದಾಯವನ್ನ ಎಸ್​ಟಿ ಮೀಸಲಾತಿಗೆ ಸೇರಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರನ್ನು ಭೇಟಿ ಮಾಡಿ ಕೂಡಲೇ ನಮ್ಮ ಸಮುದಾಯವನ್ನ ಎಸ್​ಟಿ ಮೀಸಲಾತಿಗೆ ಸೇರಿಸಬೇಕೆಂದು ಒತ್ತಾಯ ಮಾಡುತ್ತೇವೆ ಎಂದರು.
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಮೂಲ ಸೌಕರ್ಯ ಸಿಗುತ್ತಿಲ್ಲ. ಗುಡಿಸಲು ಮುಕ್ತ ಕರ್ನಾಟಕವನ್ನು ಮಾಡುತ್ತೇವೆ ಎಂದು ಸರ್ಕಾರ ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಇದುವರೆಗೂ ಗುಡಿಸಲು ಮುಕ್ತ ಮಾಡಲು ಸಾಧ್ಯವಾಗಿಲ್ಲ. ಸರ್ಕಾರ ಕೂಡಲೇ ಕಾಡುಗೊಲ್ಲ ಸಮುದಾಯ ನೆಲೆಸಿರುವ ಸ್ಥಳಗಳಿಗೆ ಭೇಟಿ ನೀಡಿ ಆ ಗ್ರಾಮದ ಜನರಿಗೆ ಮೂಲ ಸೌಕರ್ಯ ಒದಗಿಸಿ ಕೊಟ್ಟರೆ ಮಾತ್ರ ಗುಡಿಸಲು ಮುಕ್ತ ಕರ್ನಾಟಕ ಮಾಡಲು ಸಾಧ್ಯ ಎಂದರು.
ಕಾಡುಗೊಲ್ಲ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ್​ ಮಾತನಾಡಿ, ಸರ್ಕಾರಗಳು ಕಾಡುಗೊಲ್ಲ ಸಮುದಾಯವನ್ನು ಎಸ್​ಟಿ ಮೀಸಲಾತಿಗೆ ಸೇರಿಸುತ್ತೇವೆ ಎಂದು ಸುಳು ಭರವಸೆ ನೀಡುತ್ತಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಸುಮುದಾಯಕ್ಕೆ ಎಸ್​ಟಿ ಮೀಸಲಾತಿ ಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯ ಎನ್​ಡಿಎ ಅಭ್ಯರ್ಥಿಗಳ ಪರವಾಗಿ ಮತ ಹಾಕಿದ್ದೇವೆ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net