ಸರ್ಕಾರದಿಂದಲೇ ನಾಲ್ವಡಿ ಜಯಂತಿ ಆಚರಿಸಲಿ

ಚನ್ನರಾಯಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಆಯೋಜಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ 142ನೇ ಜಯಂತೋತ್ಸವದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಪುಷ್ಪಾರ್ಚನೆ ಸಲ್ಲಿಸದರು. ಹಡೇನಹಳ್ಳಿ ಲೋಕೇಶ್, ಬಿ.ಆರ್.ರಮೇಶ್, ಮಂಜಪ್ಪ, ಮುಳ್ಳುಕೆರೆ ಪ್ರಕಾಶ್, ಜಬಿವುಲ್ಲಾ ಬೇಗ್, ದಿಂಡಗೂರು ಗೋವಿಂದರಾಜು, ಯಶೋದಾ ಜೈನ್, ಮಮತಾ ಇದ್ದರು.
ಚನ್ನರಾಯಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಆಯೋಜಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ 142ನೇ ಜಯಂತೋತ್ಸವದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಪುಷ್ಪಾರ್ಚನೆ ಸಲ್ಲಿಸದರು. ಹಡೇನಹಳ್ಳಿ ಲೋಕೇಶ್, ಬಿ.ಆರ್.ರಮೇಶ್, ಮಂಜಪ್ಪ, ಮುಳ್ಳುಕೆರೆ ಪ್ರಕಾಶ್, ಜಬಿವುಲ್ಲಾ ಬೇಗ್, ದಿಂಡಗೂರು ಗೋವಿಂದರಾಜು, ಯಶೋದಾ ಜೈನ್, ಮಮತಾ ಇದ್ದರು.
Published on
ಚನ್ನರಾಯಪಟ್ಟಣ: ಮೈಸೂರು ಸಂಸ್ಥಾನದ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಸರ್ಕಾರದಿಂದಲೇ ಆಚರಿಸುವಂತಾಗಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಆಯೋಜಿಸಲಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ 142ನೇ ಜಯಂತ್ಯುತ್ಸವದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರು ಕೇವಲ ಮೈಸೂರಿಗೆ ಸೀಮಿತವಾಗಿರದೆ ಇಡೀ ಕರ್ನಾಟಕದ ಅಭಿವೃದ್ಧಿಗೆ ಅಡಿಪಾಯ ಹಾಕಿದ ದೂರದೃಷ್ಟಿಯ ರಾಜರಾಗಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೂ ಚಿರಸ್ಥಾಯಿಯಾಗಿ ಉಳಿಯುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಸ್ವಾತಂತ್ರೃ ಪೂರ್ವದಲ್ಲಿಯೇ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕಾಗಿ ಪ್ರಜಾಡಳಿತ ಜಾರಿ ಮಾಡಿ, ಹಿಂದುಳಿದವರಿಗೆ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯ ಜಾರಿಗೆ ತಂದರು. ದೇವದಾಸಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಗಳನ್ನು ರದ್ದುಗೊಳಿಸಿ, ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆ ಮಾಡಿ ಶಿಕ್ಷಣಕ್ಕೆ ಆದ್ಯತೆ ನೀಡಿದರು. ಏಷ್ಯಾ ಖಂಡದಲ್ಲಿಯೇ ಮೊದಲಿಗೆ ಜಲ ವಿದ್ಯುತ್ ಉತ್ಪಾದನೆ ಮಾಡಿ, ನಾಡನ್ನು ಬೆಳಗಿಸಿದ್ದಲ್ಲದೇ, ಆಧುನಿಕ ಕೈಗಾರಿಕೆಗಳನ್ನು ಸ್ಥಾಪಿ,ಸಿ ಉದ್ಯೋಗ ಸೃಷ್ಟಿಸಿ, ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ್ದಾರೆ. ಇವರ ಜಯಂತಿಯನ್ನು ರಾಜ್ಯದಾದ್ಯಂತ ಸರ್ಕಾರದ ವತಿಯಿಂದ ಅದ್ದೂರಿಯಾಗಿ ಆಚರಿಸಬೇಕು. ಈ ಬಗ್ಗೆ ಅಧಿವೇಶನದ ವೇಳೆ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ನವೋದಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಂಜಪ್ಪ ಅವರು ನಾಲ್ವಡಿಯವರ ಕೊಡುಗೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಗಳು ನಿಜಕ್ಕೂ ಅಪಾರ. ಅವರ ಆಳ್ವಿಕೆಯ ಕಾಲವನ್ನು ಮೈಸೂರು ಸಂಸ್ಥಾನದ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅವರ ಜನಪರ ಆಡಳಿತ ಮತ್ತು ದೂರದೃಷ್ಟಿಯ ಯೋಜನೆಗಳು ನಾಡಿನ ಸವಾರ್ಂಗೀಣ ಅಭಿವೃದ್ಧಿಗೆ ಬುನಾದಿಯಾಗಿತ್ತು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಿ.ಕೃಷ್ಣೇಗೌಡ ಹಾಗೂ ಶಿವನಗೌಡ ಪಾಟೀಲ್ ಅವರನ್ನು ಗೌರವಿಸಲಾಯಿತು. ನಾಲ್ವಡಿ ಕೃಷ್ಣರಾಜರ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಿ.ಆರ್.ರಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳಾದ ಮುಳ್ಳುಕೆರೆ ಪ್ರಕಾಶ್, ಜಬಿವುಲ್ಲಾ ಬೇಗ್, ದಿಂಡಗೂರು ಗೋವಿಂದರಾಜು, ಯಶೋದಾ ಜೈನ್, ಮಮತಾ ಸೇರಿದಂತೆ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net