ಸ್ಥಳಿಯರೇ ರಸ್ತೆಯ ಗುಣಮಟ್ಟ ಪರಿಶೀಲಿಸಲಿ road

ಸ್ಥಳಿಯರೇ ರಸ್ತೆಯ ಗುಣಮಟ್ಟ ಪರಿಶೀಲಿಸಲಿ road
ಸ್ಥಳಿಯರೇ ರಸ್ತೆಯ ಗುಣಮಟ್ಟ ಪರಿಶೀಲಿಸಲಿ road
Published on
ಟೇಕಲ್:ಮಾಲೂರು ತಾಲೂಕಿನಲ್ಲಿ 6 ತಿಂಗಳೊಳಗೆ ಎಲ್ಲ ಗ್ರಾಮೀಣ ರಸ್ತೆಗಳು ಗುಣಮಟ್ಟದ ರಸ್ತೆಗಳಾಗಿ ಮಾರ್ಪಾಡಾಗಲಿವೆ. ಸುಮಾರು <1 ಕೋಟಿ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಿಂದ ಸಿಸಿ ರಸ್ತೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.road
ಟೇಕಲ್​ನ ಕೊಂಡಶೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಅಗರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಿಂದ 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ತಾಲೂಕಿಗೆ ಗ್ರಾಮೀಣಾಭಿವೃದ್ಧಿಗೆ 38 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿಸಿದ್ದು, ತಾಲೂಕಿನ ಗ್ರಾಮೀಣ ರಸ್ತೆಗಳ ಸಂಪರ್ಕಗಳನ್ನು ಸಿಸಿ ರಸ್ತೆಗಳನ್ನಾಗಿ ಮಾಡುವುದು ನಮ್ಮ ಕರ್ತವ್ಯವಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರು, ಇಂಜಿನಿಯರ್​ಗಳು ಗುಣಮಟ್ಟದ ರಸ್ತೆ ಮಾಡುತ್ತಿದ್ದಾರೆ ಎಂಬುದನ್ನು ಸ್ಥಳಿಯರೇ ಗಮನಿಸಬೇಕು ಎಂದರು. ಕೊಂಡಶೆಟ್ಟಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್​
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net